Saturday, May 4, 2024
Homeಯಕ್ಷಗಾನಪುತ್ತೂರು ನಾರಾಯಣ ಹೆಗ್ಡೆ (Puttur Narayana Hegde)

ಪುತ್ತೂರು ನಾರಾಯಣ ಹೆಗ್ಡೆ (Puttur Narayana Hegde)

  

ಪುತ್ತೂರು ನಾರಾಯಣ ಹೆಗ್ಡೆಯವರ ಜೀವನ ಚರಿತ್ರೆ  

ಹೆಸರು: ಪುತ್ತೂರು ನಾರಾಯಣ ಹೆಗ್ಡೆ 
ವೃತ್ತಿ:  ಯಕ್ಷಗಾನ ಕಲಾವಿದತಂದೆ : ಪುತ್ತೂರು ಸುಬ್ರಾಯ ಹೆಗಡೆ.
ತಾಯಿ : ಸೀತಮ್ಮ
ಒಡಹುಟ್ಟಿದವರು : ದಾಸಪ್ಪ ಹೆಗಡೆ (ಅಣ್ಣ) ಶೇಷಮ್ಮ (ಅಕ್ಕ).
ಪತ್ನಿ : ಸಂಜೀವಿನಿ.
ಮಕ್ಕಳು : ಮೂರು ಗಂಡು ಮತ್ತು   ನಾಲ್ಕು ಹೆಣ್ಣು ಮಕ್ಕಳು.
ಹುಟ್ಟಿದ್ದು : ಪುತ್ತೂರಿನ ಬಪ್ಪಳಿಗೆ ಎಂಬಲ್ಲಿ.
ವಿದ್ಯಾಭ್ಯಾಸ : ಮೂರನೇ ತರಗತಿ.
ಅನುಭವ : ಸ್ವಲ್ಪ ಸಮಯ ಅರಣ್ಯ ರಕ್ಷಕನಾಗಿ.
ಕಲಾವಿದನಾಗಿ : ಕೂಡ್ಲು ಮೇಳದಲ್ಲಿ ಸುಮಾರು ಏಳೆಂಟು ವರ್ಷ, ಸುರತ್ಕಲ್ ಮೇಳದಲ್ಲಿ ಒಂದು ವರ್ಷ. ಆಮೇಲೆ ಸುಮಾರು 35 ವರ್ಷಗಳು ಧರ್ಮಸ್ಥಳ ಮೇಳದಲ್ಲಿ. ನಿಧನ: 1992
ಗಂಡು ಮಕ್ಕಳಲ್ಲಿ ಮೊದಲನೆಯವರು ಖ್ಯಾತ ಯಕ್ಷಗಾನ ಕಲಾವಿದ  ದಿ|ಚಂದ್ರಶೇಖರ ಹೆಗ್ಡೆ. ಶ್ರೀ ದೇವರಾಜ ಹೆಗ್ಡೆ, ಕಲಾವಿದರೂ ಹೌದು. ಧರ್ಮಸ್ಥಳ ಎಸ್.ಡಿ.ಎಂ. ಲಾ ಕಾಲೇಜು, ಮಂಗಳೂರು ಇಲ್ಲಿ ಉದ್ಯೋಗಿ. ಶ್ರೀ ಗಿರೀಶ್ ಹೆಗ್ಡೆ, ಕಲಾವಿದರು ಮತ್ತು ಶ್ರೀ ಧರ್ಮಸ್ಥಳ ಮೇಳದ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದಾರೆ.  ಪುತ್ತೂರು ನಾರಾಯಣ ಹೆಗ್ಡೆಯವರ ತಾಯಿ ಗರ್ಭಿಣಿಯಾಗಿರುವಾಗಲೇ ತಂದೆ ಸುಬ್ರಾಯ ಹೆಗಡೆಯವರು ತೀರಿ ಹೋಗಿದ್ದರು. ಇವರನ್ನು ಪ್ರಸವಿಸಿದ ನಂತರ ಮೂರೇ ತಿಂಗಳಲ್ಲಿ ತಾಯಿ ಕೂಡಾ ಇಹಲೋಕವನ್ನು ತ್ಯಜಿಸಿದ್ದರು. ಅಕ್ಕ ಶೇಷಮ್ಮನ ಆರೈಕೆಯಲ್ಲೇ ನಾರಾಯಣ  ಬೆಳೆಯಬೇಕಾಯಿತು. ರಾಗಿಕುಮೇರಿ ಶಾಲೆಯಲ್ಲಿ ಮೂರನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿ ಕಲಿಯುವಿಕೆಯನ್ನು ನಿಲ್ಲಿಸಬೇಕಾಗಿ ಬಂತು. ಆಮೇಲೆ ಆಟ ನೋಡುವ ಆಸಕ್ತಿ ಚಪಲಗಳಿತ್ತು. 13ನೇ ವಯಸ್ಸಿನಲ್ಲಿಯೇ ಮನೆಯವರೊಂದಿಗೆ ಮುನಿಸಿಕೊಂಡು ಮಂಗಳೂರಿನಲ್ಲಿ ಕೆಲಸಕ್ಕೆ ಸೇರಿದ್ದರು. ಆಮೇಲೆ ಕೆಲವು ಕಡೆಯಲ್ಲಿ ಫಾರೆಸ್ಟ್ ಗಾರ್ಡ್ ಆಗಿ ಕೆಲಸ ಮಾಡಿದ್ದರು. ಶಿರಾಡಿ, ನಾರಾವಿ ಇತ್ಯಾದಿ ಕಡೆಗಳಲ್ಲಿ ಕೆಲಸ ಮಾಡಿದರು. ಆಟದ ಆಸಕ್ತಿಯಿಂದ ಆಟ-ಕೂಟಗಳನ್ನು ಬಿಡದೆ ನೋಡುತ್ತಿದ್ದರು.ಯಕ್ಷಗಾನದ ಆಸಕ್ತಿಯಿಂದಾಗಿ ಪೆರ್ಣಂಕಿಲ ಮೇಳದಲ್ಲಿ ಪೆಟ್ಟಿಗೆ ಹೊರುವ ಕೆಲಸಕ್ಕೆ ಚಿಕ್ಕಪ್ಪ ದೇವಪ್ಪ ಹೆಗಡೆಯವರು ಸೇರಿಸಿದರು. ಮೇಳದ ತಿರುಗಾಟದ ನಂತರ ಪುನಃ Guard  ಆಗಿ ಕೆಲಸ ಇರುತ್ತಿತ್ತು. ನಂತರ ಮೂಲ್ಕಿ ಮೇಳಕ್ಕೆ ಸೇರಿದರು. ಸಣ್ಣ ತಿಮ್ಮಪ್ಪು ಎಂಬವರ ಮಾರ್ಗದರ್ಶನ ಅವರಿಗಾಗಿತ್ತು.  ಅವರ ವೇಷಗಳಲ್ಲಿ ಸಣ್ಣ ತಿಮ್ಮಪ್ಪು ಅವರ ಛಾಯೆಯಿತ್ತಂತೆ. ಆದರೆ ಕ್ರಮೇಣ  ಪುತ್ತೂರು ನಾರಾಯಣ ಹೆಗ್ಡೆಯವರು ತನ್ನದೇ ಸ್ವಂತ ಶೈಲಿಯನ್ನು ರೂಢಿಸಿಕೊಂಡು ಪ್ರಸಿದ್ಧಿಯನ್ನು ಪಡೆದರು.ಮೂಲ್ಕಿ ಮೇಳದಲ್ಲಿ ಸುಮಾರು ಏಳೆಂಟು ವರ್ಷ ಕಲಾವಿದರಾಗಿ ಸೇವೆ ಸಲ್ಲಿಸಿದ್ದರು. ಕೆಲವರು ಸಮಸ್ಯೆಗಳಿಂದ ಮೂಲ್ಕಿ ಮೇಳವನ್ನು ಬಿಡಬೇಕಾಗಿ ಬಂತು. ಆಮೇಲೆ ಕಸ್ತೂರಿ ಪೈಗಳ ಕರೆಯಂತೆ ಸುರತ್ಕಲ್ ಮೇಳವನ್ನು ಸೇರಿದರು. ಆಮೇಲೆ ಪೂಜ್ಯ ಹೆಗಡೆಯವರು ಅವರನ್ನು ಧರ್ಮಸ್ಥಳ ಮೇಳಕ್ಕೆ ಕರೆಸಿಕೊಂಡರು. ಆಮೇಲೆ ಸುಮಾರು 30 ಕ್ಕೂ ಹೆಚ್ಚು ವರ್ಷಗಳಷ್ಟು ಕಾಲ ಧರ್ಮಸ್ಥಳ ಮೇಳದಲ್ಲೇ ಕಲಾ ವ್ಯವಸಾಯ ಮಾಡಿದರು.  ಪುತ್ತೂರು ನಾರಾಯಣ ಹೆಗ್ಡೆಯವರು 1992ರಲ್ಲಿ ನಿಧನ ಹೊಂದಿದರು. 

RELATED ARTICLES

1 COMMENT

  1. Wonderful yakshagana artist Puttur Narayan hegde.i know him very well his act as a Ravana,kansa, Hiranyakashipu,Hiranyaksha,Maisasur Madhu,kaitabha,Annapa in Dharmasthala kshetra mahatme,Ganamani, Rituparna,shani etc,I love him so much,but we miss you sir 🙏🙏🙏🙏🙏🌹

LEAVE A REPLY

Please enter your comment!
Please enter your name here

Most Popular

Recent Comments