ನವೆಂಬರ್ ತಿಂಗಳು 27ರಿಂದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಎಂಬ ಹೆಸರಿನಿಂದ ತಿರುಗಾಟ ಮಾಡಲಿರುವ ಪಾವಂಜೆ ಮೇಳದ ಸಂಪೂರ್ಣ ಆಡಳಿತ ಶ್ರೀ ಕ್ಷೇತ್ರ ಪಾವಂಜೆಯದ್ದೆ ಆಗಿರುತ್ತದೆ ಮತ್ತು ಯಕ್ಷಗಾನ ಪ್ರದರ್ಶನ, ಕಲಾವಿದರ ಆಯ್ಕೆ, ರಂಗ ಪ್ರಸ್ತುತಿ ಮುಂತಾದ ಪ್ರದರ್ಶನಕ್ಕೆ ಸಂಬಂಧಪಟ್ಟ ಎಲ್ಲಾ ವಿಷಯಗಳಲ್ಲಿ ಮೇಳದ ಪ್ರಧಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗುತ್ತದೆ ಎಂದು ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಪಾವಂಜೆಯ ಆಡಳಿತ ಮೊಕ್ತೇಸರ ಎಂ. ಶಶೀಂದ್ರ ಕುಮಾರ್ ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಟ್ಲ ಸತೀಶ್ ಶೆಟ್ಟಿ ಮತ್ತು ಪಾವಂಜೆ ದೇವಳದ ಆಡಳಿತ ಮೊಕ್ತೇಸರ ಶಶೀಂದ್ರ ಕುಮಾರ್, ನೂತನ ಮೇಳದ ಬಗ್ಗೆ ಮಾಹಿತಿ ನೀಡಿದರು. ಈಗಾಗಲೇ ಮೇಳದ ಕಲಾವಿದರ ಪಟ್ಟಿಯನ್ನೂ ಬಿಡುಗಡೆ ಮಾಡಲಾಗಿದೆ. ನೂತನ ಪಾವಂಜೆ ಮೇಳದಲ್ಲಿ ಪ್ರಸಿದ್ಧ ಕಲಾವಿದರ ದಂಡೇ ಇದೆ. ಹಾಗಾದರೆ ಅವರ್ಯಾರೆಲ್ಲಾ ಅಂತ ನೋಡೋಣ.
ಭಾಗವತರು: ಪಟ್ಲ ಸತೀಶ್ ಶೆಟ್ಟಿ, ಪ್ರಫುಲ್ಲಚಂದ್ರ ನೆಲ್ಯಾಡಿ ಹಿಮ್ಮೇಳ: ಪದ್ಮನಾಭ ಉಪಾಧ್ಯಾಯ, ಗುರುಪ್ರಸಾದ್ ಬೊಳ್ಳಿಂಜಡ್ಕ, ಪ್ರಶಾಂತ್ ವಗೆನಾಡು, ಪೂರ್ಣೇಶ್ ಆಚಾರ್ಯ
ವಿಧೂಷಕರು: ಉಜಿರೆ ನಾರಾಯಣ, ಸಂದೇಶ್ ಮಂದಾರ. ಸ್ತ್ರೀ ಪಾತ್ರದಲ್ಲಿ: ಅಕ್ಷಯ್ ಕುಮಾರ್, ರಾಜೇಶ್ ನಿಟ್ಟೆ, ಯೋಗೀಶ್ ಕಡಬ, ವಿಶ್ವಾಸ್ ಕಾವೂರು
ಪುರುಷ ಪಾತ್ರಗಳಲ್ಲಿ: ರಾಧಾಕೃಷ್ಣ ನಾವಡ, ದಿವಾಣ ಶಿವಶಂಕರ ಭಟ್, ಸಂತೋಷ್ ಕುಮಾರ್ ಮಾನ್ಯ, ಅಡ್ಕ ರಾಕೇಶ್ ರೈ, ಸತೀಶ್ ನೈನಾಡು, ಮಾಧವ ಕೊಳ್ತಮಜಲು, ಮೋಹನ್ ಬೆಳ್ಳಿಪ್ಪಾಡಿ, ಮನೀಷ್ ಪಾಟಾಳಿ, ಲೋಕೇಶ ಮುಚ್ಚೂರು, ಹರಿರಾಜ್ ಕಿನ್ನಿಗೋಳಿ, ರೋಹಿತ್, ದಿವಾಕರ, ಲಕ್ಷಣ, ಮಧುರಾಜ್, ಭುವನ್ ಮೊದಲಾದವರು.