(ಶ್ರೀ ಅಳಿಕೆ ರಾಮಯ್ಯ ರೈ ಕೋಲುಳಿ ಸುಬ್ಬನ ಬಗ್ಗೆ – ತನ್ನ ಆತ್ಮಕಥನ ‘ಅಳಿಕೆ ಸ್ಮೃತಿ – ಕೃತಿ’ಯಲ್ಲಿ )
“ಬಣ್ಣದ ವೇಷದ ಸುಬ್ಬ ಕೋಲುಳಿ ಸುಬ್ಬನೆಂದೇ ಖ್ಯಾತ. ಇವನದು ಈಡು ಜೋಡಿಲ್ಲದ ಬಣ್ಣದ ವೇಷಗಾರಿಕೆ. ಅಪ್ರತಿಮ ವಾಗ್ವಾದ ನಿಪುಣ. ಇವನ ಮುಖದ ಚಿಟ್ಟಿ, ಬಣ್ಣದ ವೇಷದ ಅಟ್ಟಹಾಸಕ್ಕೆ ಹೆದರಿ ಮೂರ್ಛೆ ಹೋದವರೂ ಲೆಕ್ಕವಿಲ್ಲದಷ್ಟು ಮಂದಿ.
ಕೆಲೆವೆಡೆಗಳಲ್ಲಿ ಮಕ್ಕಳೂ ಹೆಂಗಸರೂ ಹೆದರಿಕೊಳ್ಳದಂತೆ ಸುಬ್ಬನ ವೇಷ ಬರುವುದೆಂದು ಮುನ್ನೆಚ್ಚರಿಕೆ ಕೊಡುವ ಸಂಪ್ರದಾಯವಿತ್ತು. ನನ್ನ ಜೀವಮಾನದಲ್ಲಿ ಇಂತಹ ಮನಸ್ಸಿನಿಂದ ಮಾಯದ ಬಣ್ಣದ ವೇಷವನ್ನು ನೋಡಿಲ್ಲವೆಂದು ಪ್ರಾಂಜಲವಾಗಿ ಹೇಳುವೆ”