ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ಕಳೆದ ಏಳು ವರ್ಷಗಳಿಂದ ನೀಡುತ್ತಾ ಬಂದ ಮೇಲಿನ ಎರಡು ಪ್ರಶಸ್ತಿಗಳ ಪ್ರದಾನ ಕಾರ್ಯಕ್ರಮ ನವಂಬರ್ 7 ರಂದು ಸಂಜೆ 5.15 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂಪನ್ನಗೊಳ್ಳಲಿದೆ.
- 5th Standard, English LESSON 10 – MOVING PICTURES
- 7th English, Prose Unit 7 – A Tribute to Netaji
- 7th Social History, CHAPTER 21 – PROGRESS IN DIFFERENT FIELDS
- 7th Social History, CHAPTER 20 – KARNATAKA-ECONOMIC AND SOCIAL TRANSFORMATION
- 7th Standard English Unit 8 – The Town by the Sea

ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹ ಸಂದೇಶ ನೀಡಲಿದ್ದಾರೆ.

ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಸ್ತ್ರೀವೇಷಧಾರಿ ಮೂರೂರು ವಿಷ್ಣು ಭಟ್ಟರಿಗೂ, ಅಭಿಮಾನಿ ಬಳಗದ ಗೌರವಾಧ್ಯಕ್ಷರಾಗಿದ್ದ ಟಿ. ವಿ.ರಾವ್ ಪ್ರಶಸ್ತಿಯನ್ನು

ಹವ್ಯಾಸಿ ಹಿಮ್ಮೇಳ ವಾದಕ, ವೇಷಧಾರಿ ಅಜಿತ್‍ಕುಮಾರ್ ಅಂಬಲಪಾಡಿ ಇವರಿಗೂ ಪ್ರದಾನ ಮಾಡಲಾಗುವುದೆಂದು ಅಭಿಮಾನಿ ಬಳಗದ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮತ್ತು ಕಾರ್ಯದರ್ಶಿ ಶ್ರೀ ಎಂ. ಗೋಪಿಕೃಷ್ಣ ರಾವ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.