ಈ ಚಳಿಗಾಲದಲ್ಲಿ ಕೊರೋನಾ ವೈರಲ್ ಹೆಚ್ಚಾಗಲಿದೆಯೇ? ಕೊರೋನಾ ಎರಡನೆಯ ಅಲೆ ಇಡೀ ವಿಶ್ವವನ್ನೇ ಭಾದಿಸಲಿದೆಯೇ? ಎಂಬ ಪ್ರಶ್ನೆಗಳು ಈಗ ಎಲ್ಲಾ ದೇಶಗಳನ್ನು ಕಾಡಲಾರಂಭಿಸಿದೆ.
ಕೊರೋನಾ ಎರಡನೆಯ ಅಲೆಯು ಇಡೀ ವಿಶ್ವವನ್ನೇ ಭಾದಿಸದಿದ್ದರೂ ಚಳಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಇರುವ ರಾಷ್ಟ್ರಗಳಲ್ಲಿ ಕೊರೋನಾ ಮತ್ತೆ ಹೆಚ್ಚಾಗುವ ಸಾಧ್ಯತೆಗಳಿವೆಯೆಂದು ಅಂದಾಜಿಸಲಾಗಿದೆ. ಅಂತಹಾ ಶೀತೋಷ್ಣ ಪ್ರದೇಶಗಳಲ್ಲಿರುವ ದೇಶಗಳು ಕೊರೋನಾ ಇನ್ನೊಮ್ಮೆ ಮಾಡುವ ದಾಳಿಯನ್ನು ಎದುರಿಸಲು ಈಗಾಗಲೇ ಸಮರ ಸನ್ನದ್ಧವಾಗಿವೆ.
- 5th Standard, English LESSON 10 – MOVING PICTURES
- 7th English, Prose Unit 7 – A Tribute to Netaji
- 7th Social History, CHAPTER 21 – PROGRESS IN DIFFERENT FIELDS
- 7th Social History, CHAPTER 20 – KARNATAKA-ECONOMIC AND SOCIAL TRANSFORMATION
- 7th Standard English Unit 8 – The Town by the Sea
ಈಗಾಗಲೇ ಜರ್ಮನಿ ಮತ್ತು ಫ್ರಾನ್ಸ್ ದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಳ್ಳಲಾಗಿದೆ. ಜರ್ಮನಿ ಮತ್ತು ಫ್ರಾನ್ಸ್ ದೇಶದಲ್ಲಿ ಮತ್ತೆ ಲಾಕ್ ಡೌನ್ ಘೋಷಿಸಲಾಗಿದೆ. ಜರ್ಮನ್ ಚಾನ್ಸಲರ್ ಏಂಜೆಲಾ ಮೆರ್ಕೆಲ್ ಮತ್ತು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ತಮ್ಮ ತಮ್ಮ ದೇಶಗಳಲ್ಲಿ ಮತ್ತೊಮ್ಮೆ ಲಾಕ್‍ಡೌನ್ ಮಾಡುವಂತೆ ಬುಧವಾರ ಆದೇಶ ಹೊರಡಿಸಿದ್ದಾರೆ.

ಚಳಿಗಾಲದಲ್ಲಿ ಕೊರೊನಾ ವೈರಸ್ ಅಥವಾ ಸೋಂಕು ಹರಡುವಿಕೆ ಅತಿ ಹೆಚ್ಚಿನ ವೇಗವನ್ನು ಪಡೆದುಕೊಳ್ಳುವ ಆತಂಕದಿಂದ ಜರ್ಮನಿ ಮತ್ತು ಫ್ರಾನ್ಸ್ ಸರ್ಕಾರಗಳು ಈ ಒಂದು ನಿರ್ಧಾರವನ್ನು ಕೈಗೊಂಡಿವೆ. ಫ್ರಾನ್ಸ್ ಇಡೀ ದೇಶವೇ ಲಾಕ್ ಆಗಲಿದೆ. ಆದರೆ ಜರ್ಮನಿ ನಾಲ್ಕು ವಾರದ ಅವಧಿಗೆ ಲಾಕ್‍ಡೌನ್ ಘೋಷಿಸಿದೆ.

ಒಂದು ವಾರದಿಂದ ಯುರೋಪ್ ರಾಷ್ಟ್ರಗಳಲ್ಲಿ ಅನಿರೀಕ್ಷಿತವಾಗಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ಎರಡೂ ರಾಷ್ಟ್ರಗಳು ಈ ನಿರ್ಧಾರಕ್ಕೆ ಬಂದಿವೆ ಎನ್ನಲಾಗುತ್ತಿದೆ.

ಯುರೋಪ್ ರಾಷ್ಟ್ರಗಳು, ಬ್ರಿಟನ್, ನಾರ್ವೆ, ಸ್ವಿಟ್ಜರ್‍ಲ್ಯಾಂಡ್ ದೇಶಗಳಲ್ಲಿ ಏಳು ದಿನಗಳಲ್ಲಿ ಸುಮಾರು 10 ಲಕ್ಷ ಮಂದಿಗೆ ಕೊರೊನಾ ಸೋಂಕು ತಗುಲಿದೆ.
- 5th Standard, English LESSON 10 – MOVING PICTURES
- 7th English, Prose Unit 7 – A Tribute to Netaji
- 7th Social History, CHAPTER 21 – PROGRESS IN DIFFERENT FIELDS
- 7th Social History, CHAPTER 20 – KARNATAKA-ECONOMIC AND SOCIAL TRANSFORMATION
- 7th Standard English Unit 8 – The Town by the Sea
ಮುಂದಿನ ದಿನಗಳಲ್ಲಿ ಇದು ಇನ್ನೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನವೆಂಬರ್ ಅಂತ್ಯದ ವರೆಗೂ ಜರ್ಮನಿಯಲ್ಲಿ ಲಾಕ್ ಡೌನ್ ಇರಲಿದೆ.