‘ಪಾರ್ತಿಸುಬ್ಬ’ ಎಂಬ ಹೆಸರು ಯಕ್ಷಗಾನದ ತಿಳುವಳಿಕೆಯುಳ್ಳ ಮಂದಿಯ ಹೃದಯದಲ್ಲಿ ಪುಳಕವನ್ನೆಬ್ಬಿಸಬಹುದು. ಯಕ್ಷಗಾನದ ಜನಕ ಎಂದೇ ಕರೆಯಲ್ಪಡುವ ಪಾರ್ತಿಸುಬ್ಬನ ಊರಾದ ಕಾಸರಗೋಡು ಜಿಲ್ಲೆಯ ಕುಂಬಳೆಯು ಪಾರ್ತಿಸುಬ್ಬನ ಹೆಸರಿನಿಂದ ಗುರುತಿಸಲ್ಪಟ್ಟಿದೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
ಯಕ್ಷಗಾನ ಕವಿ, ಕಲಾವಿದನೂ ಆದ ಪಾರ್ತಿಸುಬ್ಬನ ಸ್ಮರಣಾರ್ಥ ಕುಂಬಳೆಯ ರಸ್ತೆಯೊಂದಕ್ಕೆ ಅವರ ಹೆಸರನ್ನು ಇಡಲಾಗಿದೆ. ಕುಂಬಳೆಯ ಪೊಲೀಸ್ ಠಾಣೆಯ ಸಮೀಪದ ರಸ್ತೆಯೊಂದಕ್ಕೆ ಪಾರ್ತಿಸುಬ್ಬನ ಹೆಸರನ್ನು ಇಡಲಾಗಿದೆ. ಈ ರಸ್ತೆಯನ್ನು ‘ಯಕ್ಷಕವಿ ಪಾರ್ತಿಸುಬ್ಬ ರಸ್ತೆ’ ಎಂದು ನಾಮಕರಣ ಮಾಡಲಾಗಿದೆ.

ಈ ರಸ್ತೆಯ ನಾಮಫಲಕವನ್ನು ಕುಂಬಳೆಯಲ್ಲಿ ಅನಾವರಣಗೊಳಿಸಲಾಯಿತು. ಕುಂಬಳೆ ಗ್ರಾಮಪಂಚಾಯತ್ ಈ ರಸ್ತೆಗೆ ಯಕ್ಷಕವಿ ಪಾರ್ತಿಸುಬ್ಬ ರಸ್ತೆ ಎಂದು ನಾಮಕರಣ ಮಾಡಲು ಅಧಿಕೃತವಾಗಿ ಒಪ್ಪಿಗೆ ನೀಡಿತ್ತು.

ಈ ರಸ್ತೆಯ ನಾಮಫಲಕದ ಅನಾವರಣವನ್ನು ಕುಂಬಳೆ ಪಂಚಾಯತ್ ಅಧ್ಯಕ್ಷ ಶ್ರೀ ಪುಂಡರೀಕಾಕ್ಷ ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಇನ್ನಿತರ ಪಂಚಾಯತ್ ಸದಸ್ಯರು, ಪಟ್ಲ ಸತೀಶ್ ಶೆಟ್ಟಿ, ಜಗನ್ನಾಥ ಶೆಟ್ಟಿ, ರಾಘವೇಂದ್ರ ಬದಿಯಡ್ಕ ಮೊದಲಾದವರು ಉಪಸ್ಥಿತರಿದ್ದರು.

