ಪ್ರಸಿದ್ಧಿಗಾಗಿ ಬಾಗದೆ ಪರಂಪರೆ ಸಂಪ್ರದಾಯವನ್ನು ಮುರಿಯದೆ ಭಾಗವತರಾಗಿ ಮೆರೆದ ನೆಬ್ಬೂರು ಶ್ರೀ ನಾರಾಯಣ ದೇವರು ಹೆಗಡೆಯವರ ಹಾಡುಗಾರಿಕೆಯು ಬಡಗುತಿಟ್ಟಿನ ಯಕ್ಷಗಾನಕ್ಕೆ ಒಂದು ವಿಶೇಷ ಕೊಡುಗೆ ಎಂದೇ ಗುರುತಿಸಲ್ಪಟ್ಟಿದೆ. ಕಲಾವಿದರ ಸಾಮರ್ಥ್ಯವನ್ನು ಹೊರಗೆಡಹುವಲ್ಲಿ ಮತ್ತು ಹೆಚ್ಚಿಸುವಲ್ಲಿ ಇವರ ಹಾಡುಗಾರಿಕೆಯು ಅತ್ಯಂತ ಸಹಕಾರಿಯಾಗಿರುತ್ತಿತ್ತು.
ಘಟ್ಟದ ಮೇಲಿನಿಂದ ಭಾಗವತಿಕೆಯನ್ನು ಕಲಿಯಲೆಂದೇ ಕೆಳಗಿಳಿದು ಕೆರೆಮನೆಯತ್ತ ಸಾಗಿದವರು. ಪ್ರಸಿದ್ಧ ರಂಗನಟ ಶ್ರೀ ಇಡಗುಂಜಿ ಮೇಳದ ಸಂಸ್ಥಾಪಕ ಕೆರೆಮನೆ ಶ್ರೀ ಶಿವರಾಮ ಹೆಗಡೆಯವರಿಂದ ಅವರ ಮನೆಯಲ್ಲಿದ್ದುಕೊಂಡೇ ಕಲಿತರು. ಭಾಗವತಿಕೆಯನ್ನು ಕಲಿಯಲು ಗುರುವಾಗಿ ರಂಗನಟರನ್ನು ಆಯ್ಕೆ ಮಾಡಿದ್ದು ಮತ್ತು ರಂಗನಟನೊಬ್ಬನು ಶ್ರೇಷ್ಠ ಭಾಗವತನನ್ನು ತಯಾರು ಮಾಡಿದ್ದು ನಿಜಕ್ಕೂ ಅಚ್ಚರಿಯನ್ನು ತರುವ ವಿಚಾರ.
- 5th Standard, English LESSON 10 – MOVING PICTURES
- 7th English, Prose Unit 7 – A Tribute to Netaji
- 7th Social History, CHAPTER 21 – PROGRESS IN DIFFERENT FIELDS
- 7th Social History, CHAPTER 20 – KARNATAKA-ECONOMIC AND SOCIAL TRANSFORMATION
- 7th Standard English Unit 8 – The Town by the Sea
ಇಡಗುಂಜಿ ಮೇಳದ ಪ್ರದರ್ಶನಗಳನ್ನು ನೋಡಿದ ಹಳೆಯ ಪ್ರೇಕ್ಷಕರು ನೆಬ್ಬೂರರು ನಿಧಾನ ಲಯದಲ್ಲಿ ಹಾಡುವ ಪದ್ಯಗಳ ಸೊಗಸು ಅವರ್ಣನೀಯವಾದುದು ಎಂದು ಪ್ರಶಂಸಿಸುತ್ತಾರೆ. “ನಾನು ವೇಗದ ಲಯದಲ್ಲೇ ಹಾಡಬಲ್ಲೆ ಮತ್ತು ಹಾಡಿದ್ದೇನೆ. ಆದರೆ ನಿಧಾನಲಯದಲ್ಲಿ ಯಕ್ಷಗಾನದ ನಿಜವಾದ ಸೌಂದರ್ಯವು ಸರಿಯಾಗಿ ಕಾಣಿಸಿಕೊಳ್ಳುತ್ತದೆ. ವೇಗದ ಹಾಡುಗಾರಿಕೆಯಲ್ಲಿ ಕತೆ ಓಡುತ್ತಿರುತ್ತದೆ ಆದರೆ ಸ್ಥಾಪನೆಯಾಗುವುದಿಲ್ಲ” ಎಂದು ನೆಬ್ಬೂರು ಭಾಗವತರು ಹೇಳುತ್ತಾರೆ.
ಬಂಧುಗಳಾದ ಶ್ರೀ ಸುಬ್ಬು ಭಾವ ಮತ್ತು ಶ್ರೀ ರಮೇಶ ಹಳೇಕಾನಗೋಡ ಇವರ ಜೊತೆ ನೆಬ್ಬೂರರ ಮನೆಗೆ ಹೋಗಿದ್ದೆ. (ಶಿರಸಿಯ ಸಮೀಪದ ಹಣಗಾರು) ಹಳ್ಳಿಯ ಹಳೆಯ ಶೈಲಿಯ ಮನೆಯು ನಮ್ಮನ್ನು ಸ್ವಾಗತಿಸಿತ್ತು. ನೆಬ್ಬೂರು ದಂಪತಿಗಳು ನಮ್ಮನ್ನು ನಗುತ್ತಾ ಮಾತನಾಡಿಸಿ ಸತ್ಕರಿಸಿದ್ದರು. ಅವರ ಪ್ರೀತಿಯ ಮಾತುಗಳಿಂದಲೇ ಹಸಿವು ದೂರವಾಗಿತ್ತು.

ನೆಬ್ಬೂರು ನಾರಾಯಣ ಭಾಗವತರು 1936ನೆಯ ಇಸವಿ ಡಿಸೆಂಬರ್ 16ರಂದು ನೆಬ್ಬೂರು ದೇವರು ಹೆಗಡೆ ಮತ್ತು ಗಣಪಿ ಅಮ್ಮ ದಂಪತಿಗಳಿಗೆ ಮಗನಾಗಿ ಹಣಗಾರು ಎಂಬಲ್ಲಿ ಜನಿಸಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಮೀಪದ ಊರಿದು. ಇವರ ಮೂಲ ಮನೆ ನೆಬ್ಬೂರು. ನೆಬ್ಬೂರು ನಾರಾಯಣ ಭಾಗವತರ ತಂದೆ ದೇವರು ಹೆಗಡೆಯವರು ಮನೆ ಅಳಿಯನಾಗಿ ಹಣಗಾರಿನಲ್ಲಿ ವಾಸವಾಗಿದ್ದರು. ಹಣಗಾರು ನೆಬ್ಬೂರಿನ ಸಮೀಪದ ಊರು. ನಾರಾಯಣ ಹೆಗಡೆಯವರು ದೇವರು ಹೆಗಡೆ, ಗಣಪಿ ಅಮ್ಮ ದಂಪತಿಗಳ ನಾಲ್ಕು ಮಂದಿ ಮಕ್ಕಳಲ್ಲಿ ಎರಡನೆಯವರು (ಮೂರು ಹೆಣ್ಣು ಮತ್ತು ಒಂದು ಗಂಡು).
ನೆಬ್ಬೂರು ಭಾಗವತರು ಆಡಳ್ಳಿ ಸರಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿವರೆಗೆ ಓದಿದ್ದರು. ಆಡಳ್ಳಿಯು ಹಣಗಾರು ಮತ್ತು ನೆಬ್ಬೂರು ಮಧ್ಯೆ ಇರುವ ಹಳ್ಳಿ. ಹೆಚ್ಚಿನ ವಿದ್ಯಾಭ್ಯಾಸಕ್ಕೆ ಕುಮಟಾ, ಶಿರಸಿ ಕಡೆಗೆ ಹೋಗಬೇಕಾಗಿತ್ತು. ಅದಕ್ಕೆ ಅನುಕೂಲಗಳಿರಲಿಲ್ಲ. ಸಾರಿಗೆ ಸಂಪರ್ಕವೂ ಇರಲಿಲ್ಲ. ಶಾಲಾ ವಿದ್ಯಾರ್ಥಿಯಾಗಿದ್ದಾಗಲೆ ನೆಬ್ಬೂರರಿಗೆ ಯಕ್ಷಗಾನ ಆಸಕ್ತಿ ಹುಟ್ಟಿತು.
- 5th Standard, English LESSON 10 – MOVING PICTURES
- 7th English, Prose Unit 7 – A Tribute to Netaji
- 7th Social History, CHAPTER 21 – PROGRESS IN DIFFERENT FIELDS
- 7th Social History, CHAPTER 20 – KARNATAKA-ECONOMIC AND SOCIAL TRANSFORMATION
- 7th Standard English Unit 8 – The Town by the Sea
ಆಡಳ್ಳಿ ಜಿಲ್ಲಾ ಬೋರ್ಡ್ ಶಾಲೆಗೆ ಸುಬ್ರಾಯ ಬಸ್ತೀಕರ್ ಎಂಬವರು ಗೋಕರ್ಣದಿಂದ ಅಧ್ಯಾಪಕರಾಗಿ ಬಂದರು. ನೆಬ್ಬೂರರಿಗೆ ಯಕ್ಷಗಾನಾಸಕ್ತಿ ಹುಟ್ಟಲು ಇವರೆ ಕಾರಣರು. ಮಕ್ಕಳ ತಂಡವನ್ನು ಕಟ್ಟಿ ಅವರಿಗೆ ನಾಟಕ, ಆಟ, ತಾಳಮದ್ದಳೆ ವಿಚಾರದಲ್ಲಿ ತರಬೇತಿ ನೀಡಿ ಪ್ರದರ್ಶನಕ್ಕೆ ಅವಕಾಶ ಮಾಡಿ ಕೊಟ್ಟವರು ಬಸ್ತೀಕರ್ ಮಾಸ್ತರರು. ಶಾಲಾ ವಿದ್ಯಾರ್ಥಿಯಾಗಿದ್ದಾಗ ತಾಳಮದ್ದಳೆಯಲ್ಲಿ ಶ್ರೀಕೃಷ್ಣ ಸಂಧಾನದ ವಿದುರ, ಅತಿಕಾಯ ಕಾಳಗದ ಸುಗ್ರೀವ, ಭೀಷ್ಮಪರ್ವದ ಧರ್ಮರಾಯ ಮೊದಲಾದ ಪಾತ್ರಗಳನ್ನು ನೆಬ್ಬೂರರು ನಿರ್ವಹಿಸಿದರು. ನಾಟಕಗಳಲ್ಲೂ ಅಭಿನಯಿಸಿದ್ದರು. ಬಸ್ತೀಕರ್ ಮಾಸ್ತರರು ಸಂಭಾಷಣೆಗಳನ್ನು ಬರೆದುಕೊಡುತ್ತಿದ್ದರು. ನೆಬ್ಬೂರರ ಅರ್ಥಗಾರಿಕೆಯಲ್ಲಿ ಶ್ರುತಿ ಜ್ಞಾನವಿದ್ದುದನ್ನ ಅಧ್ಯಾಪಕರು ಗುರುತಿಸಿದ್ದರು. ನೀನು ಭಾಗವತಿಕೆ ಕಲಿ ಎಂಬ ನಿರ್ದೇಶನವನ್ನೂ ನೀಡಿದ್ದರು.

ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ (ಕೆರೆಮನೆ ಮೇಳ) ಕೆರೆಮನೆ ಶಿವರಾಮ ಹೆಗಡೆಯವರಿಂದ 1934ರಲ್ಲಿ ಸ್ಥಾಪಿತವಾಗಿತ್ತು. ಶ್ರೀ ವೆಂಕಟ್ರಮಣ ಯಾಜಿಯವರು ಅದರ ಸ್ಥಾಪಕ ಭಾಗವತರಾಗಿದ್ದರು. ಅವರಿಗೆ ವಯಸ್ಸಾಗಿತ್ತು. ಕೆರೆಮನೆ ಶಿವರಾಮ ಹೆಗಡೆಯವರು ಭಾಗವತಿಕೆ ಕಲಿಕಾ ಆಸಕ್ತಿಯುಳ್ಳವರಿಗಾಗಿ ಅರಸುತ್ತಿದ್ದರು. ಕಲಿತು ಭಾಗವತನಾಗುವೆನೆಂಬ ಆಸೆಯನ್ನು ಹೊತ್ತು ನೆಬ್ಬೂರರು ಗಣೇಶ ಚೌತಿಯ ಮರುದಿನದಂದು ಹುಟ್ಟೂರಿನಿಂದ ಕೆರೆಮನೆಯತ್ತ ಹೊರಟರು.
- 5th Standard, English LESSON 10 – MOVING PICTURES
- 7th English, Prose Unit 7 – A Tribute to Netaji
- 7th Social History, CHAPTER 21 – PROGRESS IN DIFFERENT FIELDS
- 7th Social History, CHAPTER 20 – KARNATAKA-ECONOMIC AND SOCIAL TRANSFORMATION
- 7th Standard English Unit 8 – The Town by the Sea
ತಲುಪಿದ ಮಾರನೆಯ ದಿನ ಸಂಜೆ ನೆಬ್ಬೂರರಿಗೆ ಪ್ರಥಮ ಪರೀಕ್ಷೆ. ಮದ್ದಳೆಗಾರರನ್ನು ಕರೆಸಿ ಪದ್ಯ ಹೇಳಿಸಿದರು. ಅಂದು ಗೇರುಸೊಪ್ಪ ಹೈಗುಂದದಲ್ಲಿ ಆಯುರ್ವೇದ ವೈದ್ಯರಾಗಿದ್ದ ಡಾ. ಪದ್ಮನಾಭಯ್ಯನವರು ಬಂದಿದ್ದರು. ಇವರು ತಾಳಮದ್ದಳೆ ಅರ್ಥಧಾರಿಗಳೂ ಆಗಿದ್ದರು. ಕೆರೆಮನೆ ಶಿವರಾಮ ಹೆಗಡೆಯವರ ಆತ್ಮೀಯರು. ನೆಬ್ಬೂರರು ಪದ್ಯ ಹೇಳಿದರು. ಸ್ವರ ಇಬ್ಬರಿಗೂ ಇಷ್ಟವಾಯಿತು. ಆಗ ನೆಬ್ಬೂರರಿಗೆ ವಯಸ್ಸು 18. ಶಿವರಾಮ ಹೆಗಡೆಯವರು ನೆಬ್ಬೂರರನ್ನು ಮಗನೆಂದೇ ಸ್ವೀಕರಿಸಿದ್ದರು.

ಮನೆಯ ಸದಸ್ಯನಂತೆಯೇ ಇದ್ದುಕೊಂಡು ನೆಬ್ಬೂರರು ಅಲ್ಲಿ ಕಲಿತು ಸಾಧಕರಾದರು. ನೆಬ್ಬೂರರು ಶಿವರಾಮ ಹೆಗಡೆ ದಂಪತಿಗಳನ್ನು ಅಪ್ಪಯ್ಯ, ಅಮ್ಮ ಎಂದೆ ಕರೆಯುತ್ತಿದ್ದರು. ಕೆರೆಮನೆ ಮಹಾಬಲ ಹೆಗಡೆಯವರು ಕೂಡಾ ನೆಬ್ಬೂರರ ಜತೆ ಪದ್ಯ ಹೇಳುತ್ತಾ ಕುಣಿಯುತ್ತಿದ್ದರು. ಅವರಿಂದಲೂ ನಾನು ಬಹಳಷ್ಟನ್ನು ಕಲಿತಿದ್ದೇನೆ ಎಂದು ಹೇಳುವ ಮೂಲಕ ನೆಬ್ಬೂರರು ಮಹಾಬಲ ಹೆಗಡೆಯವರನ್ನು ಗೌರವಿಸುತ್ತಾರೆ. ಕೆರೆಮನೆ ಶಂಭು ಹೆಗ್ಗಡೆಯವರು ಆತ್ಮೀಯರಾದರು. ಜತೆಯಾಗಿಯೇ ಕಲಿತು ಇಬ್ಬರು ಪ್ರಸಿದ್ಧರಾದರು. ಅಣ್ಣತಮ್ಮಂದಿರಂತೆ ಮನೆಯಲ್ಲೂ ಕಲಾ ಬದುಕಿನುದ್ದಕ್ಕೂ ಬಾಳಿಬೆಳಗಿದರು.
- 5th Standard, English LESSON 10 – MOVING PICTURES
- 7th English, Prose Unit 7 – A Tribute to Netaji
- 7th Social History, CHAPTER 21 – PROGRESS IN DIFFERENT FIELDS
- 7th Social History, CHAPTER 20 – KARNATAKA-ECONOMIC AND SOCIAL TRANSFORMATION
- 7th Standard English Unit 8 – The Town by the Sea
1959 ಮತ್ತು 1960ರಲ್ಲಿ ಕೆರೆಮನೆ ಮೇಳದಲ್ಲಿ ಸಂಗೀತಗಾರನಾಗಿ ತಿರುಗಾಟ. ಆಗ ಮಾರ್ವಿ ನಾರಣಪ್ಪ ಉಪ್ಪೂರರು ಪ್ರಧಾನ ಭಾಗವತರಾಗಿದ್ದರು. ನೆಬ್ಬೂರರ ಸ್ವರ, ವಿನಯತೆಗೆ ಉಪ್ಪೂರರು ಮಾರುಹೋಗಿದ್ದರು. ವಾತ್ಸಲ್ಯವನ್ನು ತೋರಿ ಪ್ರೋತ್ಸಾಹಿಸಿದರು. ಎಚ್ಚರಿಸುತ್ತಲೂ ಇದ್ದರು. ತನ್ನ ಹಾಡುಗಾರಿಕೆ ಮುಗಿದ ಮೇಲೆ ಉಪ್ಪೂರರ ಭಾಗವತಿಕೆಗೆ ಹಾರ್ಮೋನಿಯಂ ಬಾರಿಸುತ್ತಿದ್ದರು. ಇದರಿಂದ ರಂಗಾನುಭವ, ಪ್ರಸಂಗದ ನಡೆಗಳನ್ನು ತಿಳಿದುಕೊಳ್ಳುವ ಅವಕಾಶವಾಗಿತ್ತು. “ಉಪ್ಪೂರರಲ್ಲಿ ಬಹಳಷ್ಟು ಕಲಿತೆ, ಎರಡು ವರ್ಷ ಮೇಳದಲ್ಲಿ ಅವರೊಂದಿಗೆ ಒಡನಾಡುವ ಭಾಗ್ಯ ಸಿದ್ಧಿಸಿತ್ತು. ಅವರ ಒಡನಾಟ ನನ್ನ ಕಲಾಬದುಕಿನ ಉತ್ಕರ್ಷಕ್ಕೆ ಕಾರಣವಾಯಿತು” ಎಂದು ನೆಬ್ಬೂರರು ಉಪ್ಪೂರರನ್ನು ಗೌರವಿಸುತ್ತಾರೆ.

1961ರಲ್ಲಿ ಉಪ್ಪೂರರು ಅಮೃತೇಶ್ವರಿ ಮೇಳಕ್ಕೆ ಹೋದಾಗ ನೆಬ್ಬೂರರು ಕೆರೆಮನೆ ಮೇಳದ ಪ್ರಧಾನ ಭಾಗವತರಾಗಿ ಆಯ್ಕೆ ಯಾದರು. 1969ರಿಂದ ಮೂರು ವರ್ಷಗಳ ಕಾಲ ಸದ್ರಿ ಮೇಳವು ತಿರುಗಾಟ ನಡೆಸಿರಲಿಲ್ಲ. 1969ರಲ್ಲಿ ನೆಬ್ಬೂರರು ಅಮೃತೇಶ್ವರಿ ಮೇಳದಲ್ಲೂ ಮುಂದಿನ ಎರಡು ವರ್ಷಗಳ ಕಾಲ ಸಾಲಿಗ್ರಾಮ ಮೇಳದಲ್ಲಿ ತಿರುಗಾಟ ನಡೆಸಿದ್ದರು. 1972ರಲ್ಲಿ ಕೆರೆಮನೆ ಮೇಳವನ್ನು ಶಂಭು ಹೆಗ್ಗಡೆಯವರು ಪುನರ್ ಸಂಘಟಿಸಿದ್ದರು. ಅಲ್ಲಿಂದ ತೊಡಗಿ 2009ರ ವರೆಗೆ ನೆಬ್ಬೂರರ ಭಾಗವತಿಕೆಯಲ್ಲಿ ಕೆರೆಮನೆ ಮೇಳದ ಪ್ರದರ್ಶನಗಳು ಎಲ್ಲೆಡೆ ರಂಜಿಸಿದವು.
- 5th Standard, English LESSON 10 – MOVING PICTURES
- 7th English, Prose Unit 7 – A Tribute to Netaji
- 7th Social History, CHAPTER 21 – PROGRESS IN DIFFERENT FIELDS
- 7th Social History, CHAPTER 20 – KARNATAKA-ECONOMIC AND SOCIAL TRANSFORMATION
- 7th Standard English Unit 8 – The Town by the Sea
ಮೂಲ್ಕಿ, ಕೊಲ್ಲೂರು ಅಲ್ಲದೆ ಪುರ್ಲೆ ರಾಮಚಂದ್ರರಾಯರ ಶಿರಸಿ ಮೇಳ ದಲ್ಲೂ ಅಲ್ಪಕಾಲ ನೆಬ್ಬೂರರು ವ್ಯವಸಾಯ ಮಾಡಿದ್ದರು. ನೆಬ್ಬೂರರ ಭಾಗವತಿಕೆಯಲ್ಲಿ ಅನೇಕ ಪುರಾಣ ಪ್ರಸಂಗಗಳ ಪ್ರದರ್ಶನಗಳು ಪ್ರೇಕ್ಷಕರಿಗೆ ಮರೆಯಲಾಗದ ಅನುಭವವಾಗಿ ಉಳಿಯಿತು. ಶ್ರೀಕೃಷ್ಣ ಸಂಧಾನ, ಕೀಚಕವಧೆ, ಮಾಗಧವಧೆ, ಪಟ್ಟಾಭಿಷೇಕ, ಕರ್ಣಪರ್ವ, ಗದಾಯುದ್ಧ, ರತ್ನಾವತಿ ಕಲ್ಯಾಣ, ಚಂದ್ರಹಾಸ, ಸುಧನ್ವಾರ್ಜುನ, ಶ್ರೀರಾಮನಿರ್ಯಾಣ ಮೊದಲಾದ ಪ್ರಸಂಗಗಳ ಹಾಡುಗಳು ನೆಬ್ಬೂರರಿಗೆ ಜನಪ್ರಿಯತೆಯನ್ನು ನೀಡಿತು.
ದೂರದರ್ಶನ ಕಾರ್ಯಕ್ರಮಗಳಲ್ಲೂ ಹಲವು ಬಾರಿ ಕಾಣಿಸಿಕೊಂಡ ಮೊದಲಿಗರಿವರು. ಕೆರೆಮನೆ ತಂಡದೊಂದಿಗೆ ಹಲವಾರು ಬಾರಿ ವಿದೇಶ ಪ್ರವಾಸ ಮಾಡಿದರು. 1984ರಲ್ಲಿ ಮೊದಲಿಗೆ ಬಹ್ರೈನ್‌ಗೆ, ಅಮೇರಿಕಾ ದೇಶಕ್ಕೆ ಎರಡು ಬಾರಿ ಹಾಗೂ ಅಲ್ಲಿನ ಹೆಚ್ಚಿನ ಎಲ್ಲಾ ನಗರಗಳಲ್ಲಿ ಪ್ರದರ್ಶನ ನೀಡಿದರು. ಲಂಡನ್, ನೇಪಾಳ, ಚೀನಾ, ಫ್ರಾನ್ಸ್, ಸ್ಪೇನ್, ಬಾಂಗ್ಲಾ, ಸಿಂಗಪೂರ್, ಬರ್ಮಾ, ಲಾವೋಸ್, ಮಲೇಶಿಯ, ಫಿಲಿಪ್ಪೀನ್ಸ್, (ಕೆರೆಮನೆ ಶಿವಾನಂದ ಹೆಗಡೆ ಅವರ ನೇತೃತ್ವದಲ್ಲಿ) ಮೊದಲಾದ ದೇಶಗಳ ಪ್ರೇಕ್ಷಕರನ್ನು ತಮ್ಮ ಗಾನಸುಧೆಯಲ್ಲಿ ತೇಲಾಡಿಸಿದರು.

1996ರಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಬಂದಿತ್ತು. 2002ರಲ್ಲಿ ಕೆರೆಮನೆ ಶಿವರಾಮ ಹೆಗಡೆ ಪ್ರಶಸ್ತಿ, 2006ರಲ್ಲಿ ಶೇಣಿ ಪ್ರಶಸ್ತಿ ಅಲ್ಲದೆ ನೆಬ್ಬೂರರಿಗೆ ರಾಜ್ಯ ಪ್ರಶಸ್ತಿಯೂ ಕರ್ನಾಟಕ ಸರಕಾರದಿಂದ ಕೊಡಲ್ಪಟ್ಟಿತ್ತು. ಭಾರತ ದೇಶದೆಲ್ಲೆಡೆ ಮತ್ತು ವಿದೇಶಗಳಲ್ಲೂ ಕಲಾಪ್ರಿಯರಿಗೆ ತಮ್ಮ ಗಾನಸುಧಾ ಅಮೃತವನ್ನು ಉಣಿಸಿದ ನೆಬ್ಬೂರು ನಾರಾಯಣ ಭಾಗವತರನ್ನು ಎಲ್ಲೆಡೆ ಸಂಘ ಸಂಸ್ಥೆಗಳು ಸನ್ಮಾನಿಸಿ ಗೌರವಿಸಿವೆ. ಯಕ್ಷಗಾನ ಪ್ರಪಂಚದಲ್ಲಿ ಖ್ಯಾತ ರಂಗನಟರಾಗಿ ರಂಜಿಸಿದ ಕೆರೆಮನೆ ಶಿವರಾಮ ಹೆಗಡೆಯವರ ಪ್ರಶಸ್ತಿ, ತಾಳಮದ್ದಳೆ ಕ್ಷೇತ್ರದಲ್ಲಿ ಬೆಳೆದು ಕೀರ್ತಿವಂತರಾದ ಶೇಣಿ ಗೋಪಾಲಕೃಷ್ಣ ಭಟ್ಟರ ಪ್ರಶಸ್ತಿ ಇವೆರಡೂ ನನ್ನ ಬದುಕಿನ ಆಸ್ತಿಗಳು ಎಂದು ಹೇಳುವ ನೆಬ್ಬೂರರು ಕೆರೆಮನೆ ಕುಟುಂಬದ ನಾಲ್ವರು ಕಲಾವಿದರನ್ನು ರಂಗದಲ್ಲಿ ಕುಣಿಸಿದವರು.
- 5th Standard, English LESSON 10 – MOVING PICTURES
- 7th English, Prose Unit 7 – A Tribute to Netaji
- 7th Social History, CHAPTER 21 – PROGRESS IN DIFFERENT FIELDS
- 7th Social History, CHAPTER 20 – KARNATAKA-ECONOMIC AND SOCIAL TRANSFORMATION
- 7th Standard English Unit 8 – The Town by the Sea
ಗುರು ಶಿವರಾಮ ಹೆಗಡೆಯವರನ್ನು ಭಯ ಮತ್ತು ಆತಂಕದಿಂದ ಕುಣಿಸಿದೆ. ಶಂಭು ಹೆಗಡೆಯವರನ್ನು ಪ್ರೀತಿ ವಿಶ್ವಾಸ ಆತ್ಮೀಯತೆಯಿಂದ ಕುಣಿಸಿದೆ. ಶಿವಾನಂದ ಹೆಗಡೆಯನ್ನು ವಾತ್ಸಲ್ಯಭಾವದಿಂದ ಕುಣಿಸಿದೆ. ಕೆರೆಮನೆ ಶಿವಾನಂದ ಹೆಗಡೆ ಅವರ ಪುತ್ರ ಶ್ರೀಧರನನ್ನು ಮೋಹದಿಂದ ಕುಣಿಸಿದ್ದೇನೆ. ಆದರೂ ಶಿವರಾಮ ಹೆಗಡೆಯವರ ನಿರೀಕ್ಷೆಯ ಮಟ್ಟವನ್ನು ಮುಟ್ಟಲು ಆಗಲಿಲ್ಲ ಎಂಬ ಬೇಸರವಿದೆ ಎಂಬ ನೆಬ್ಬೂರರ ಮಾತುಗಳಲ್ಲಿ ಯಕ್ಷಗಾನವೂ ಒಂದು ಮಹಾಸಿಂಧು, ಕಲಿತು ಮುಗಿಯುವಂಥದ್ದಲ್ಲ ಎಂಬ ಧ್ವನಿಯು ಅಡಗಿದೆ.
ನೆಬ್ಬೂರು ನಾರಾಯಣ ಭಾಗವತರ ಆತ್ಮಕಥನವು ‘ನೆಬ್ಬೂರಿನ ನಿನಾದ’ ಎಂಬ ಶಿರೋನಾಮೆಯಡಿ 2007 ರಂದು ಪ್ರಕಟಿಸಲ್ಪಟ್ಟಿವೆ. ಬಡಗುತಿಟ್ಟು ಯಕ್ಷಗಾನ ಕಂಡ ಇಂತಹಾ ಮಹಾನ್ ಭಾಗವತರಾದ ಶ್ರೀ ನೆಬ್ಬೂರು ನಾರಾಯಣ ಭಾಗವತರು ಕಳೆದ ವರ್ಷ ಅಂದರೆ 2019ರ ಮೇ ತಿಂಗಳಿನಲ್ಲಿ ಅಸಂಖ್ಯ ಕಲಾಭಿಮಾನಿಗಳನ್ನು ಆಗಲಿ ಅವ್ಯಕ್ತ ಪ್ರಪಂಚವನ್ನು ಸೇರಿಕೊಂಡರು.
ಲೇಖಕ: ರವಿಶಂಕರ್ ವಳಕ್ಕುಂಜ