ಬೆಂಗಳೂರಿನ ಕಲಾಕದಂಬ ಆರ್ಟ್ ಸೆಂಟರ್ ಸಂಸ್ಥೆಯು ನೀಡುವ ಕಾಳಿಂಗ ನಾವಡ ಪ್ರಶಸ್ತಿ 2020ರ ಕಾರ್ಯಕ್ರಮವು ಕಾಳಿಂಗ ನಾವಡರ ಮೂಲ ಮನೆಯಾದ ಗುಂಡ್ಮಿಯ ಭಾಗವತರ ಮನೆಯಲ್ಲಿ ಈ ದಿನ ಸಂಜೆ ಯಶಸ್ವಿಯಾಗಿ ನಡೆಯಿತು.
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು
ಯಕ್ಷಗಾನದ ಹಿರಿಯ ಕಲಾವಿದರಾದ ಹಂದಟ್ಟು ಗೋವಿಂದ ಉರಾಳರು ಈ ಒಂದು ಪ್ರಶಸ್ತಿಗೆ ಭಾಜನರಾದರು. ಈ ಒಂದು ಸಮಾರಂಭದಲ್ಲಿ ಹಿರಿಯ ಪುರೋಹಿತರಾದ ಶ್ರೀ ವೆಂಕಪ್ಪಯ್ಯ ಭಟ್ಟರು, ಕನ್ನಡ ಪ್ರಾಧ್ಯಾಪಕರಾದ ಡಾ.ಶ್ರೀಕಾಂತ್ ಸಿದ್ದಾಪುರ, ಯಕ್ಷಗಾನ ಭಾಗವತರಾದ ಶ್ರೀ ಸುರೇಂದ್ರ ಫಣಿಯೂರ್, ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದ ಕಾರ್ಯದರ್ಶಿಗಳಾದ ಶ್ರೀ ರಾಜಶೇಖರ ಹೆಬ್ಬಾರ್, ಕಾಳಿಂಗ ನಾವಡರ ಸಹೋದರ ಶ್ರೀ ಗಣಪಯ್ಯ ನಾವಡ, ಕಲಾಕದಂಬ ಆರ್ಟ್ ಸೆಂಟರ್ ನ ಅಂಬರೀಷ ಭಟ್ ಹಾಗೂ ಕಲಾಕದಂಬ ಆರ್ಟ್ ಸೆಂಟರ್ ನ ನಿರ್ದೇಶಕರಾದ ಡಾ.ರಾಧಾಕೃಷ್ಣ ಉರಾಳ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಸಭಾ ಕಾರ್ಯಕ್ರಮದ ನಂತರ ಲಂಬೋದರ ಹೆಗ್ಡೆ ಹಾಗೂ ಸುಜಯೀಂದ್ರ ಹಂದೆ ತಂಡದವರು ಯಕ್ಷ ಗಾನ ವೈಭವದ ಮೂಲಕ ಪ್ರೇಕ್ಷಕರ ಮನರಂಜಿಸಿದರು. ಈ ಸಂಪೂರ್ಣ ಕಾರ್ಯಕ್ರಮದ ನಿರ್ವಹಣೆಯನ್ನು ಮುರಳೀಧರ ನಾವಡ ಹಾಗೂ ವಿಶ್ವನಾಥ ಉರಾಳರು ಯಶಸ್ವಿಯಾಗಿ ನಿರ್ವಹಿಸಿದರು.