ಮಂದಾರ್ತಿ 3 ನೇ ಮೇಳದ ಒತ್ತು ಎರಡನೇ ವೇಷಧಾರಿ ಸಿ. ಸಾಧುಕೊಠಾರಿ (58 ವರ್ಷ) ಇಂದು (05-01-2021) ಮುಂಜಾನೆ 5 ಗಂಟೆಗೆ ದೈವಾಧೀನರಾದರು. ಸಾೈಬರಕಟ್ಟೆ ಬಳಿ ಕಾಜ್ರಳ್ಳಿಯಲ್ಲಿ ಜರಗಿದ ಮಧುರಾ ಮಹೀಂದ್ರ ಪ್ರಸಂಗದಲ್ಲಿ ಮಾಗಧನ ಪಾತ್ರವನ್ನು ಸೊಗಸಾಗಿ ನಿರ್ವಹಿಸಿ ಚೌಕಿಮನೆಯಲ್ಲಿ ಸ್ವಲ್ಪ ವಿಶ್ರಾಂತಿ ಪಡೆದ ಬಳಿಕ ಎದೆನೋವು ಬಂದುದರಿಂದ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸಹ ಕಲಾವಿದರು ವಾಹನದಲ್ಲಿ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿ ಹೃದಯ ಸ್ಥಂಭನಕ್ಕೊಳಗಾಗಿ ಕಲಾಭಿಮಾನಿಗಳನ್ನು ಶೋಕ ಸಾಗರಕ್ಕೊಳಗು ಮಾಡಿದರು. 15ನೇ ವರ್ಷಕ್ಕೆ ಮೇಳ ಸೇರಿದ ಇವರು ಗೋಳಿಗರಡಿ, ಕಮಲಶಿಲೆ, ಅಮೃತೇಶ್ವರೀ, ಸಾಲಿಗ್ರಾಮ, ಸೌಕೂರು, ಹಾಲಾಡಿ ಮತ್ತು ದೀರ್ಘಕಾಲ ಮಂದಾರ್ತಿ ಮೇಳದಲ್ಲಿ ವೈವಿಧ್ಯಮಯ ವೇಷಗಳನ್ನು ಮಾಡಿ ಕಲಾ ಸೇವೆ ಗೈದಿರುತ್ತಾರೆ.ಪತ್ನಿ, ಈರ್ವರು ಪುತ್ರರು, ಓರ್ವ ಪುತ್ರಿಯನ್ನುಅಗಲಿದ್ದು, ಅಂತ್ಯಕ್ರಿಯೆಯನ್ನುಇಂದು ಸಂಜೆ ಬಾರ್ಕೂರಿನ ಬಳಿ ಹೇರಾಡಿಯಲ್ಲಿ ನೆರೆವೇರಿಸಲಾಗುವುದು.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions
ಯಕ್ಷಗಾನ ಕಲಾರಂಗದಲ್ಲಿ ರೂ1 ಲಕ್ಷ ಜೀವನ ಆನಂದ ವಿಮಾ ಯೋಜನೆಯನ್ನು ಮಾಡಿಕೊಂಡಿದ್ದು, ಯಕ್ಷನಿಧಿಯ ಎಲ್ಲಾ ಯೋಜನೆಗಳಲ್ಲಿ ಸಂಪೂರ್ಣ ತೊಡಗಿಸಿಕೊಂಡ ಸರಳ ಸಜ್ಜನಿಕೆಯ ಕಲಾವಿದರಾಗಿದ್ದ ಇವರ ನಿಧನಕ್ಕೆ ಕಲಾರಂಗದ ಅಧ್ಯಕ್ಷ ಎಮ್.ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.