ಶೇಣಿಯವರಿಗೆ ಬಡಗಿನ ಶ್ರೇಷ್ಠ ಭಾಗವತರಾಗಿದ್ದ ಜಿ. ಆರ್. ಕಾಳಿಂಗ ನಾವಡ ಮತ್ತು ತೆಂಕಿನ ಶ್ರೇಷ್ಠ ಭಾಗವತರಾಗಿದ್ದ ಶ್ರೀ ದಾಮೋದರ ಮಂಡೆಚ್ಚರೆಂದರೆ ಅಚ್ಚುಮೆಚ್ಚು. ಕಾಳಿಂಗ ನಾವಡರಿಂದ ಪ್ರಶಂಸಿಸಲ್ಪಟ್ಟವರು ಪದ್ಯಾಣ ಗಣಪತಿ ಭಟ್ಟರು. ದಾಮೋದರ ಮಂಡೆಚ್ಚರು ಅವ್ಯಕ್ತ ಲೋಕವನ್ನು ಸೇರಿಕೊಂಡ ಮೇಲೆ ಆಟ, ಕೂಟಗಳಿಗೆ ಶೇಣಿಯವರು ಪದ್ಯಾಣರನ್ನೇ ಆಯ್ಕೆ ಮಾಡುತ್ತಿದ್ದರಂತೆ. ಇದು ಪದ್ಯಾಣ ಗಣಪತಿ ಭಟ್ಟರ ಪ್ರತಿಭೆಗೆ ಸಂದ ಗೌರವ. ಶೇಣಿ, ತೆಕ್ಕಟ್ಟೆ, ಅಗರಿ ರಘುರಾಮ ಭಾಗವತ ಮೊದಲಾದ ಶ್ರೇಷ್ಠ ಕಲಾವಿದರ ಒಡನಾಟದಿಂದ ಪಕ್ವರಾಗಿ ಶ್ರೀ ಪದ್ಯಾಣ ಗಣಪತಿ ಭಟ್ಟರು ರಂಗದಲ್ಲಿ ವಿಜೃಂಭಿಸಿದರು. ಸುರತ್ಕಲ್, ಮಂಗಳಾದೇವಿ, ಹೊಸನಗರ ಮೇಳಗಳಲ್ಲಿ ತಿರುಗಾಟ ನಡೆಸಿ ಪ್ರಸ್ತುತ ಶ್ರೀ ಹನುಮಗಿರಿ ಮೇಳದಲ್ಲಿ ಕಲಾಸೇವೆಯನ್ನು ನಡೆಸುತ್ತಿದ್ದಾರೆ.
‘‘ರಂಗವನ್ನು ಆಳುವ ಜಾಣ್ಮೆ ಪದ್ಯಾಣರಲ್ಲಿ ಮೈತುಂಬಿದೆ. ಅವರು ರಂಗದಲ್ಲಿದ್ದಷ್ಟು ಹೊತ್ತು ರಂಗದ ಎಲ್ಲಾ ಸೂಕ್ಷ್ಮ ಸಂಗತಿಗಳು ಅವರಿಗೆ ಶರಣಾಗುವ ಅವ್ಯಕ್ತ ಸಂಗತಿಯೊಂದು ಗೋಚರವಾಗುವುದು ಪದ್ಯಾಣರ ದೀರ್ಘಕಾಲದ ಅನುಭವದ ಪರಿಪಕ್ವ ಫಲವಾಗಿದೆ’’. ಸಂಪಾಜೆ ಯಕ್ಷೋತ್ಸವದ ರೂವಾರಿ, ಕಲಾಪೋಷಕ ಡಾ. ಟಿ. ಶ್ಯಾಮ್ ಭಟ್ಟರು ಆಟಕೂಟಗಳಲ್ಲಿ ಭಾಗವತರಾಗಿ ಪದ್ಯಾಣ ಗಣಪತಿ ಭಟ್ಟರ ಪ್ರಸಂಗವನ್ನು ಮುನ್ನಡೆಸಿದ ರೀತಿಯನ್ನು ನೋಡಿ, ಅನುಭವಿಸಿ ಹೇಳಿದ ಮಾತಿದು. ಪದ್ಯಾಣ ಮನೆಯಲ್ಲಿ ಹೆಚ್ಚಿನವರೂ ಕಲಾವಿದರೆಂದೇ ಹೇಳಬಹುದು. ಪದ್ಯಾಣ ಗಣಪತಿ ಭಟ್ಟರ ಅಣ್ಣ ಪದ್ಯಾಣ ಪರಮೇಶ್ವರ ಭಟ್ ಮತ್ತು ತಮ್ಮ ಪದ್ಯಾಣ ಜಯರಾಮ ಭಟ್ಟರೂ ಮದ್ದಳೆಗಾರರು. ತೆಂಕುತಿಟ್ಟಿನ ಹಿರಿಯ ಮದ್ದಳೆಗಾರರಾದ ಪದ್ಯಾಣ ಶಂಕರನಾರಾಯಣ ಭಟ್ಟರು ಇವರ ಚಿಕ್ಕಪ್ಪ (ಸಣ್ಣಜ್ಜನ ಮಗ). ಯುವ ಮದ್ದಳೆಗಾರ ಚೈತನ್ಯಕೃಷ್ಣರೂ ಪದ್ಯಾಣ ಮನೆಯವರೇ. ಪದ್ಯಾಣ ಶಂಕರನಾರಾಯಣ ಭಟ್ಟರ ತಮ್ಮ ಶಿವರಾಮ ಭಟ್ಟರ ಪುತ್ರ. ಅನೇಕ ಹಿಮ್ಮೇಳ ಮುಮ್ಮೇಳ ಕಲಾವಿದರು ಪದ್ಯಾಣ ಮನೆತನದಲ್ಲಿ ಹುಟ್ಟಿ ಬೆಳೆದರು.
- 5th Standard, English LESSON 10 – MOVING PICTURES
- 7th English, Prose Unit 7 – A Tribute to Netaji
- 7th Social History, CHAPTER 21 – PROGRESS IN DIFFERENT FIELDS
- 7th Social History, CHAPTER 20 – KARNATAKA-ECONOMIC AND SOCIAL TRANSFORMATION
- 7th Standard English Unit 8 – The Town by the Sea
ಶ್ರೀ ಪದ್ಯಾಣ ಗಣಪತಿ ಭಟ್ಟರು 1955 ಜನವರಿ 21ರಂದು ಸುಳ್ಯ ತಾಲೂಕಿನ ಕಲ್ಮಡ್ಕದ ಸಮೀಪ ಗೋಳ್ತಜೆ ಎಂಬಲ್ಲಿ ಪದ್ಯಾಣ ತಿರುಮಲೇಶ್ವರ ಭಟ್, ಸಾವಿತ್ರಿ ಅಮ್ಮ ದಂಪತಿಗಳಿಗೆ ಮಗನಾಗಿ ಜನಿಸಿದರು. ಚಿಕ್ಕ ಮಗುವಾಗಿದ್ದಾಗ ಬಾಲಪೀಡೆ ಎಂಬ ರೋಗಕ್ಕೆ ತುತ್ತಾಗಿ ಕಾಲನಾಲಯದ ಬಳಿಯವರೆಗೂ ಸಾಗಿ ಮೃತ್ಯುವನ್ನು ಜಯಿಸಿ ಬಂದಿದ್ದರು. ಒಂದು ರೀತಿಯಲ್ಲಿ ಪುನರ್ಜನ್ಮ. ಕಲ್ಮಡ್ಕ ಸರಕಾರೀ ಶಾಲೆಯಲ್ಲಿ 7ನೇ ತರಗತಿ ವರೇಗೆ ಓದಿ ಬಾಳಿಲ ವಿದ್ಯಾಬೋಧಿನೀ ಶಾಲೆಗೆ ಸೇರಿದ್ದರು. ಕಲಿಕೆಯಲ್ಲಿ ಇವರಿಗೆ ಅಷ್ಟು ಆಸಕ್ತಿಯಿರಲಿಲ್ಲ. ಹಿರಿಯರ ಒತ್ತಡಕ್ಕೆ ಮಣಿದು ಶಾಲೆಗೆ ಹೋಗುತ್ತಿದ್ದರು. ಶಾಲೆಯಲ್ಲಿ ಯಕ್ಷಗಾನ ತಂಡವು ಸಿದ್ಧವಾಗಿತ್ತು. ಆಗ ಶ್ರೀನಿವಾಸ ಉಡುಪರು ಮುಖ್ಯೋಪಾಧ್ಯಾಯರಾಗಿದ್ದರು. ಅವರ ಹೇಳಿಕೆಯಂತೆ ಶಾಲಾ ವಾರ್ಷಿಕೋತ್ಸವದ ಪ್ರದರ್ಶನ ಬಭ್ರುವಾಹನ ಕಾಳಗ ಪ್ರಸಂಗದಲ್ಲಿ ವೃಷಕೇತು ಪಾತ್ರವನ್ನು ಮಾಡಿದ್ದರು. ಗಣಪತಿ ಭಟ್ಟರು ಬಾಲಕನಾಗಿದ್ದಾಗ ಬಲು ತುಂಟರಾಗಿದ್ದರು. ಕಲಿಕೆಯಲ್ಲಿ ಹಿಂದೆ. ಯಕ್ಷಗಾನವನ್ನಾದರೂ ಕಲಿಯಲಿ ಎಂದು ಅವರಮ್ಮ ಹೇಳಿದರಂತೆ.

ಅದೇ ವರ್ಷ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಯಕ್ಷಗಾನ ಕಲಿಕಾ ಕೇಂದ್ರ ಆರಂಭವಾಗಿತ್ತು. ಯಕ್ಷಗಾನವು ಪದ್ಯಾಣ ಮನೆಯವರಿಗೆ ರಕ್ತಗತವೇ ಆಗಿರುವ ವಿಚಾರ. ಗಣಪತಿ ಭಟ್ಟರ ಅಜ್ಜ ಪುಟ್ಟುನಾರಾಯಣ ಭಟ್ಟರು ಶ್ರೇಷ್ಠ ಭಾಗವತರಾಗಿದ್ದರು. ಹಿಮ್ಮೇಳದ ಮಹಾನ್ ಗುರು ಮಾಂಬಾಡಿ ನಾರಾಯಣ ಭಾಗವತರಿಗೂ ಗುರುಸದೃಶರಾಗಿದ್ದವರು. ಅವರಿಗೆ ಅನೇಕ ಪ್ರಸಂಗಗಳು ಕಂಠಪಾಠ. ಗಣಪತಿ ಭಟ್ಟರ ತಂದೆ ತಿರುಮಲೇಶ್ವರ ಭಟ್ಟರೂ ಒಳ್ಳೆಯ ಮದ್ದಳೆಗಾರರಾಗಿದ್ದರು. ಗಣಪತಿ ಭಟ್ಟರು ಧರ್ಮಸ್ಥಳದತ್ತ ಸಾಗಿದರು. ಮಾಂಬಾಡಿ ನಾರಾಯಣ ಭಾಗವತರು, ಕುರಿಯ ವಿಠಲ ಶಾಸ್ತ್ರಿಗಳು, ಪಡ್ರೆ ಚಂದುರವರು ಸಂದರ್ಶಕರಾಗಿದ್ದರು. ಗಣಪತಿ ಭಟ್ಟರು ಸಂದರ್ಶನದಲ್ಲಿ ಅನುತ್ತೀರ್ಣರಾಗಿದ್ದರು. ಪದ್ಯಾಣ ಮನೆಯವನೆಂದು ತಿಳಿದು ಸಂದರ್ಶಕರು ಮತ್ತೆ ಖಾವಂದರಲ್ಲಿ ಹೇಳಿ ತರಬೇತಿಗೆ ಸೇರಿಸಿಕೊಂಡರಂತೆ. ಈ ಘಟನೆಯೇ ಜೀವನದ ತಿರುವು. ಕಲಾಮಾತೆಯು ಶ್ರೇಷ್ಠ ಭಾಗವತನೊಬ್ಬನನ್ನು ಕಳೆದುಕೊಳ್ಳಲು ಸಿದ್ಧಳಿರಲಿಲ್ಲ.
- 5th Standard, English LESSON 10 – MOVING PICTURES
- 7th English, Prose Unit 7 – A Tribute to Netaji
- 7th Social History, CHAPTER 21 – PROGRESS IN DIFFERENT FIELDS
- 7th Social History, CHAPTER 20 – KARNATAKA-ECONOMIC AND SOCIAL TRANSFORMATION
- 7th Standard English Unit 8 – The Town by the Sea
ಶ್ರೀ ಧರ್ಮಸ್ಥಳ ಯಕ್ಷಗಾನ ಲಲಿತ ಕಲಾ ತರಬೇತಿ ಕೇಂದ್ರದಲ್ಲಿ ಮಾಂಬಾಡಿ ನಾರಾಯಣ ಭಟ್ಟರ ಶಿಷ್ಯನಾಗಿ ಕಲಿಕೆಯತ್ತ ಗಮನಹರಿಸಿದರು. ತರಬೇತಿ ಮುಗಿದು ಮನೆಗೆ ತೆರಳುವಾಗ ಸಂದರ್ಶನದಲ್ಲಿ ಅನುತ್ತೀರ್ಣನಾಗಿದ್ದ ನೀನು ಮನೆಗೆ ಹೋಗಿದ್ದರೆ, ನಿನ್ನಂತಹ ಶಿಷ್ಯನನ್ನು ಕಳೆದುಕೊಳ್ಳುತ್ತಿದ್ದೆ. ನಿನಗೂ ನಷ್ಟವಾಗುತ್ತಿತ್ತು ಎಂದು ಮಾಂಬಾಡಿ ನಾರಾಯಣ ಭಾಗವತರು ಹೇಳಿದ್ದರಂತೆ. ಧರ್ಮಸ್ಥಳ ಕಲಿಕಾ ಕೇಂದ್ರದಿಂದ ಮರಳಿದ ನಂತರ ಪದ್ಯಾಣ ಗಣಪತಿ ಭಟ್ಟರು ಕಲ್ಮಡ್ಕ ಪರಿಸರದಲ್ಲಿ ನಡೆಯುವ ಪ್ರದರ್ಶನಗಳಲ್ಲಿ ಭಾಗವಹಿಸಿದರು. ಭಾಗವತರಾದ ದಾಸರಬೈಲು ಚನಿಯ ನಾಯ್ಕರ ಒಡನಾಟ ರಂಗದೊಳಗೆ ಪ್ರತ್ಯಕ್ಷ ಕಲಿಕೆಗೆ ವೇದಿಕೆಯಾಯಿತು. 1972-73ರ ಕಾಲ ಚೌಡೇಶ್ವರೀ ಮೇಳದ ಪ್ರದರ್ಶನ, ಪೆರಾಜೆ, ಪೆರ್ನಾಜೆ ಮೊದಲಾದ ಸ್ಥಳಗಳಲ್ಲಿ ನಡೆಯುತ್ತಿದ್ದ ಆಟಕೂಟಗಳಲ್ಲಿ ಭಾಗವಹಿಸಿದರು. ದಾಸರಬೈಲು ಚನಿಯ ನಾಯ್ಕರು ಪ್ರಸಂಗವನ್ನು ಮುನ್ನಡೆಸುತ್ತಿದ್ದ ಕ್ರಮವನ್ನು ನೋಡಿ ಕಲಿತರು. ಚನಿಯ ನಾಯ್ಕ, ಪ್ರಸಂಗಕರ್ತ ಮಧುಕುಮಾರ್ ಭಾಗವತರ ಹಾಡುಗಳಿಗೆ ಚೆಂಡೆ ಮದ್ದಳೆ ವಾದಕನಾಗಿಯೂ ಭಾಗವಹಿಸಿದರು.

ಮುಂದೆ ಶಂಕರ ಭಟ್ಟ ‘ಟೂರಿಂಗೆ ಕ್ಯಾಂಪು’ ತಿರುಗಾಟ. ಭಾಗವತನಾಗಿ ಕಲಾಸೇವೆ. ಆ ತಂಡದಲ್ಲಿ ಶಿವರಾಮ ಜೋಗಿ, ಬಾಯಾರು ಪ್ರಕಾಶ್ಚಂದ್ರ ರಾವ್, ವೇಣೂರು ಸುಂದರ ಆಚಾರ್ಯ ಮೊದಲಾದ ಕಲಾವಿದರಿದ್ದರು. ಮುಂದಿನ ವರುಷ ಸುರತ್ಕಲ್ಲು ಮೇಳಕ್ಕೆ ಸಂಗೀತಗಾರರಾಗಿ ಬರಲು ಶಿವರಾಮ ಜೋಗಿಯವರು ಮತ್ತು ವೇಣೂರು ಸುಂದರ ಆಚಾರ್ಯರು ಆಹ್ವಾನಿಸಿದಾಗ ಗಣಪತಿ ಭಟ್ಟರು ಸಂತೋಷದಿಂದ ಒಪ್ಪಿಕೊಂಡಿದ್ದರು. ಅಗರಿ ಶ್ರೀನಿವಾಸ ರಾಯರು ಮತ್ತು ಅಗರಿ ರಘುರಾಮ ರಾಯರು ಭಾಗವತರಾಗಿದ್ದರು. ಗಣಪತಿ ಭಟ್ಟರು ಸಂಗೀತಗಾರನಾಗಿ ಪೂರ್ವರಂಗವನ್ನು ನಿರ್ವಹಿಸಿ ಪ್ರಸಂಗಕ್ಕೆ ಮದ್ದಳೆಯನ್ನೂ ಬಾರಿಸು ತ್ತಿದ್ದರು. ಮೂರು ತಿಂಗಳ ಬಳಿಕ ಅಗರಿ ರಘುರಾಮ ರಾಯರು ಮುಖ್ಯ ಭಾಗವತರಾಗಿದ್ದರು. ಸಂಗೀತದ ಬಳಿಕ ಪ್ರಸಂಗದಲ್ಲಿ ಪದ್ಯ ಹೇಳುವ ಅವಕಾಶವಿತ್ತು ಪ್ರೋತ್ಸಾಹಿಸಿದ್ದರು. ಬೆಳ್ಳಾರೆಯಲ್ಲಿ ಸುರತ್ಕಲ್ಲು ಮೇಳದ ಆಟ ಆಡಿಸಿ ಅಗರಿ ಶ್ರೀನಿವಾಸ ಭಾಗವತರನ್ನು ಸನ್ಮಾನಿಸಿದ್ದರು.
- 5th Standard, English LESSON 10 – MOVING PICTURES
- 7th English, Prose Unit 7 – A Tribute to Netaji
- 7th Social History, CHAPTER 21 – PROGRESS IN DIFFERENT FIELDS
- 7th Social History, CHAPTER 20 – KARNATAKA-ECONOMIC AND SOCIAL TRANSFORMATION
- 7th Standard English Unit 8 – The Town by the Sea
ನಾಟ್ಯರಾಣಿ ಶಾಂತಲೆ, ಪಾಪಣ್ಣ ವಿಜಯ, ಕಡುಗಲಿ ಕುಮಾರರಾಮ, ರಾಜಾ ಯಯಾತಿ, ಸತೀ ಶೀಲವತಿ, ತುಳುನಾಡ ಬಲಿಯೇಂದ್ರೆ ಪದ್ಯಾಣ ಗಣಪತಿ ಭಟ್ಟರಿಗೆ ತಾರಾಮೌಲ್ಯವನ್ನು ತಂದಿತ್ತವು. ಯಶಸ್ವೀ ಯಜಮಾನರಾದ ಕಸ್ತೂರಿ ಪೈಗಳ ಸುರತ್ಕಲ್ಲು ಮೇಳವು ಗಜಮೇಳವಾಗಿ ವಿಜೃಂಭಿಸುತ್ತಿತ್ತು. ಶೇಣಿ, ತೆಕ್ಕಟ್ಟೆ, ಅಗರಿ ರಘುರಾಮ ಭಾಗವತರು, ಜಲವಳ್ಳಿ ಅಲ್ಲದೆ ಅನೇಕ ಹಿರಿಯ ಕಲಾವಿದರ ಒಡನಾಟ ಇವರಿಗೆ ದೊರಕಿತು. ರಾಮದಾಸ ಸಾಮಗರ ಜತೆ ತಿರುಗಾಟವೂ ಇತ್ತು. ಶೇಣಿಯವರು ತಿದ್ದಿ ತೀಡಿದರು. ಅಗರಿ ರಘುರಾಮ ಭಾಗವತರು ಹೆಚ್ಚು ಹೆಚ್ಚು ಹಾಡಲು ಅವಕಾಶವಿತ್ತು ಗಣಪತಿ ಭಟ್ಟರ ಪ್ರತಿಭೆ ಬೆಳಗಲು ಕಾರಣರಾದರು. ಅಗರಿಯವರ ನಿವೃತ್ತಿಯ ನಂತರ ಪ್ರಧಾನ ಭಾಗವತರಾಗಿ ಸುರತ್ಕಲ್ಲು ಮೇಳವನ್ನು ಮುನ್ನಡೆಸಿದರು.

ಪ್ರಸ್ತುತ ಹೊಸನಗರ ಮೇಳದಲ್ಲಿ ಚಿಕ್ಕಪ್ಪ ಪದ್ಯಾಣ ಶಂಕರನಾರಾಯಣ ಭಟ್ ಅವರು ಜತೆಯಲ್ಲಿದ್ದಾರೆ. ಪೌರಾಣಿಕ ಪ್ರಸಂಗಗಳ ಪರಿಪೂರ್ಣ ಮಾಹಿತಿಯಿದ್ದು ನಡೆಗಳನ್ನು ಅರಿತವರು. ಅವರು ಜತೆಯಲ್ಲಿದ್ದರೆ ಭೀಮಬಲ ಬಂದಂತಾಗುತ್ತದೆ. ತಮ್ಮ ಜಯರಾಮ ಭಟ್ಟರೂ ಮನೆ ಸದಸ್ಯ ಭರವಸೆಯ ಯುವಪ್ರತಿಭೆ ಚೈತನ್ಯಕೃಷ್ಣರೂ ಕಲಾಜೀವನದಲ್ಲಿ ಸಹಕಲಾವಿದರಾಗಿ ಒದಗಿದುದು ಸಂತೋಷ ತಂದಿದೆ’’- ಹೀಗೆ ಶ್ರೀ ಪದ್ಯಾಣ ಗಣಪತಿ ಭಟ್ಟರು ಈ ವರೇಗಿನ ಕಲಾಬದುಕಿನ ಅನಿಸಿಕೆಗಳನ್ನು, ಅನುಭವಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳುತ್ತಾರೆ.

ಮಡದಿ ಶೀಲಾಶಂಕರಿ, ವಿದ್ಯಾವಂತರೂ, ಉದ್ಯೋಗಸ್ಥರೂ ವಿವಾಹಿತರೂ ಆದ ಇಬ್ಬರು ಮಕ್ಕಳು ಸ್ವಸ್ತಿಕ್ ಪದ್ಯಾಣ ಮತ್ತು ಕಾರ್ತಿಕ್ ಪದ್ಯಾಣ. ಹೀಗೆ ಸಾಂಸಾರಿಕವಾಗಿಯೂ ಅತ್ಯಂತ ತೃಪ್ತರು. 60ನೇ ವಯಸ್ಸು, 2016ರಲ್ಲಿ ಮಂಗಳೂರು ಪುರಭವನದಲ್ಲಿ “ಪದಯಾನ ಅಭಿನಂದನಾ ಸಮಿತಿ’’ ಪುತ್ತೂರು ಇವರು ಕಲಾಭಿಮಾನಿಗಳೆಲ್ಲರೂ ಸೇರಿ ಪದ್ಯಾಣ 60ರ ಸಂಭ್ರಮ ಕಾರ್ಯಕ್ರಮವನ್ನು ಆಚರಿಸಿದ್ದರು. ಶ್ರೀ ನಾ. ಕಾರಂತರ ಸಂಪಾದಕತ್ವದಲ್ಲಿ ‘ಪದಯಾನ’ ಎಂಬ ಕೃತಿಯೂ ಪ್ರಕಟಿಸಲ್ಪಟ್ಟಿತ್ತು. ವಿದ್ವಾಂಸರು, ಹಿರಿಯ, ಕಿರಿಯ ಕಲಾವಿದರುಗಳು ಪದ್ಯಾಣ ಗಣಪತಿ ಭಟ್ಟರ ಬಗೆಗೆ ಬರೆದ ಲೇಖನಗಳು ಈ ಪುಸ್ತಕದಲ್ಲಿವೆ.
