ಶ್ರೀ ಸುಬ್ರಾಯ ದೇವಸ್ಥಾನ ಕಾಟುಕುಕ್ಕೆ ಮತ್ತು ಶ್ರೀ ಪುರಂದರದಾಸ ಆರಾಧನೋತ್ಸವ ಸಮಿತಿ (ರಿ) ಕಾಟುಕುಕ್ಕೆಯ ಆಶ್ರಯದಲ್ಲಿ ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ 13ನೇ ವರ್ಷದ ಶ್ರೀ ಪುರಂದರದಾಸ ಆರಾಧನೋತ್ಸವ ಮತ್ತು ಶ್ರೀ ಮದ್ಭಾಗವತ ಸಪ್ತಾಹ ಜ್ಞಾನಯಜ್ಞವು ಕಾಟುಕುಕ್ಕೆ ಭಜನಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಹಾಗೂ ಟ್ರಸ್ಟ್ ಗೆ ಒಳಪಟ್ಟ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಮಂಜೇಶ್ವರ, ಕಾಸರಗೋಡು ತಾಲೂಕುಗಳ ಭಜನಾ ಮಂಡಳಿಗಳ ಸಹಕಾರದೊಂದಿಗೆ ದಿನಾಂಕ 05.02.2021, ಶುಕ್ರವಾರದಿಂದ 11.02.2021 ಗುರುವಾರದ ವರೆಗೆ ನಡೆಯಲಿದೆ.
- ಯಕ್ಷಗಾನದ ಹಿರಿಯ ಭಾಗವತ ನಿಧನ
- ಹವ್ಯಾಸಿ ಯಕ್ಷಗಾನ ತಂಡಗಳ ಬಹುದೊಡ್ಡ ಸಮಾಗಮ
- ಮಹಿಳಾ ಕಾನ್ಸ್ಟೆಬಲ್ ಹತ್ಯೆ ಮಾಡಿದ ಆಕೆಯ ಸಹೋದರ – ಮರ್ಯಾದಾ ಹತ್ಯೆಯ ಸಂಶಯ ವ್ಯಕ್ತಪಡಿಸಿದ ಪೊಲೀಸರು
- ಖ್ಯಾತ ಯಕ್ಷಗಾನ ಕಲಾವಿದ ನಿಧನ
- ನಾಳೆ (03-12-2024) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ
ಈ ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನವೂ ಭಾಗವತ ಪಾರಾಯಣ, ಪ್ರವಚನ ಮತ್ತು ಭಜನೆ ನಡೆಯಲಿದೆ. ದಿನಾಂಕ 11.02.2021, ಆರಾಧನೋತ್ಸವದ ದಿನ ಸಾಂಸ್ಕೃತಿಕ ಕಾರ್ಯಕ್ರಮ ವೈವಿಧ್ಯ ನಡೆಯಲಿದೆ. ಆ ದಿನ ದಾಸ ಸಂಕೀರ್ತನೆ, ಸಮೂಹ ಗಾಯನ, ಸಭಾ ಕಾರ್ಯಕ್ರಮ, ಸನ್ಮಾನ ಮತ್ತು ಕುಣಿತ ಭಜನಾ ಪ್ರಾತ್ಯಕ್ಷಿಕೆ ನಡೆಯಲಿದೆ. ಕಾರ್ಯಕ್ರಮದ ವಿವರಗಳನ್ನು ಈ ಕೆಳಗೆ ಕೊಡಲಾಗಿದೆ.