Saturday, January 18, 2025
Homeವ್ಯಕ್ತಿ ವಿಶೇಷರವಿಚಂದ್ರನ್ ಅಶ್ವಿನ್:  ಟೆಸ್ಟ್ ಕ್ರಿಕೆಟಿನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ ಭಾರತದ ಬೌಲರ್ 

ರವಿಚಂದ್ರನ್ ಅಶ್ವಿನ್:  ಟೆಸ್ಟ್ ಕ್ರಿಕೆಟಿನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ ಭಾರತದ ಬೌಲರ್ 

ಭಾರತದ ಸ್ಪಿನ್ನರ್  ರವಿಚಂದ್ರನ್ ಅಶ್ವಿನ್ ಅವರು ಟೆಸ್ಟ್ ಕ್ರಿಕೆಟಿನಲ್ಲಿ ಹೊಸ ವಿಶ್ವದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ.

ಈಗ ನಡೆಯುತ್ತಿರುವ ಇಂಗ್ಲೆಂಡ್ ಎದುರಿನ ಎರಡನೆಯ ಟೆಸ್ಟ್ ನ ಎರಡನೆಯ ದಿನದ ಆಟದಲ್ಲಿ ಅವರು ಈ ದಾಖಲೆಯನ್ನು ಸ್ಥಾಪಿಸಿದ್ದಾರೆ.

200 ಎಡಗೈ ದಾಂಡಿಗರನ್ನು ಔಟ್ ಮಾಡುವ ಮೂಲಕ, ಈ ಸಾಧನೆ ಮಾಡಿದ ಜಗತ್ತಿನ ಏಕೈಕ ಬೌಲರ್ ಎಂಬ ಖ್ಯಾತಿಗೆ ಅಶ್ವಿನ್ ಪಾತ್ರರಾದರು. 

ಈ ವರೆಗೆ ಶ್ರೀಲಂಕಾದ ಓಫ್ ಸ್ಪಿನ್ನರ್ ಮುತ್ತಯ್ಯ ಮುರಳೀಧರ್ ಹೆಸರಿನಲ್ಲಿದ್ದ ಈ ದಾಖಲೆಯನ್ನು ಭಾರತ ರವಿಚಂದ್ರನ್ ಅಶ್ವಿನ್ ಇತ್ತೀಚಿಗೆ ಮುರಿದಿದ್ದರು.   ಮುರಳೀಧರನ್ 191 ಎಡಗೈ ದಾಂಡಿಗರನ್ನು ಔಟ್ ಮಾಡಿದ್ದರು.

ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಎಡಗೈ ಬ್ಯಾಟ್ಸ್​ಮನ್​ಗಳನ್ನು ಔಟ್ ಮಾಡಿದ ಬೌಲರುಗಳ ಪಟ್ಟಿಯಲ್ಲಿ ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್ಸನ್(186), ಆಸ್ಟ್ರೇಲಿಯಾ ವೇಗಿ ಗ್ಲೆನ್ ಮೆಕ್​ಗ್ರಾಥ್ (172), ಆಸ್ಟ್ರೇಲಿಯಾ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್(172) ಹಾಗೂ ಕನ್ನಡಿಗ ಅನಿಲ್ ಕುಂಬ್ಳೆ (167) ಇದ್ದಾರೆ.

ಎಡಗೈ ಬ್ಯಾಟ್ಸ್ ಮನ್​ಗಳಾದ ಬೆನ್ ಸ್ಟೋಕ್ಸ್ ಮತ್ತು ಸ್ಟುವರ್ಟ್ ಬ್ರಾಡ್ ಅವರ ವಿಕೆಟ್ ಪಡೆಯುವ ಮೂಲಕ ಆರ್. ಅಶ್ವಿನ್ ಈ ಸಾಧನೆ ಮಾಡಿದ್ದಾರೆ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments