ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಟೆಸ್ಟ್ ಕ್ರಿಕೆಟಿನಲ್ಲಿ ಹೊಸ ವಿಶ್ವದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ.
ಈಗ ನಡೆಯುತ್ತಿರುವ ಇಂಗ್ಲೆಂಡ್ ಎದುರಿನ ಎರಡನೆಯ ಟೆಸ್ಟ್ ನ ಎರಡನೆಯ ದಿನದ ಆಟದಲ್ಲಿ ಅವರು ಈ ದಾಖಲೆಯನ್ನು ಸ್ಥಾಪಿಸಿದ್ದಾರೆ.
200 ಎಡಗೈ ದಾಂಡಿಗರನ್ನು ಔಟ್ ಮಾಡುವ ಮೂಲಕ, ಈ ಸಾಧನೆ ಮಾಡಿದ ಜಗತ್ತಿನ ಏಕೈಕ ಬೌಲರ್ ಎಂಬ ಖ್ಯಾತಿಗೆ ಅಶ್ವಿನ್ ಪಾತ್ರರಾದರು.

ಈ ವರೆಗೆ ಶ್ರೀಲಂಕಾದ ಓಫ್ ಸ್ಪಿನ್ನರ್ ಮುತ್ತಯ್ಯ ಮುರಳೀಧರ್ ಹೆಸರಿನಲ್ಲಿದ್ದ ಈ ದಾಖಲೆಯನ್ನು ಭಾರತ ರವಿಚಂದ್ರನ್ ಅಶ್ವಿನ್ ಇತ್ತೀಚಿಗೆ ಮುರಿದಿದ್ದರು. ಮುರಳೀಧರನ್ 191 ಎಡಗೈ ದಾಂಡಿಗರನ್ನು ಔಟ್ ಮಾಡಿದ್ದರು.
ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಎಡಗೈ ಬ್ಯಾಟ್ಸ್ಮನ್ಗಳನ್ನು ಔಟ್ ಮಾಡಿದ ಬೌಲರುಗಳ ಪಟ್ಟಿಯಲ್ಲಿ ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್ಸನ್(186), ಆಸ್ಟ್ರೇಲಿಯಾ ವೇಗಿ ಗ್ಲೆನ್ ಮೆಕ್ಗ್ರಾಥ್ (172), ಆಸ್ಟ್ರೇಲಿಯಾ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್(172) ಹಾಗೂ ಕನ್ನಡಿಗ ಅನಿಲ್ ಕುಂಬ್ಳೆ (167) ಇದ್ದಾರೆ.
ಎಡಗೈ ಬ್ಯಾಟ್ಸ್ ಮನ್ಗಳಾದ ಬೆನ್ ಸ್ಟೋಕ್ಸ್ ಮತ್ತು ಸ್ಟುವರ್ಟ್ ಬ್ರಾಡ್ ಅವರ ವಿಕೆಟ್ ಪಡೆಯುವ ಮೂಲಕ ಆರ್. ಅಶ್ವಿನ್ ಈ ಸಾಧನೆ ಮಾಡಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

