ಪ್ರಸಿದ್ಧ ಸಾಹಿತಿ ಶ್ರೀ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಹೆಸರಿನಲ್ಲಿ ನೀಡಲಾಗುವ ‘ಮಾಸ್ತಿ ಪ್ರಶಸ್ತಿ’ಗೆ ಕನ್ನಡದ ಪ್ರಸಿದ್ಧ ಕವಿ, ಸಾಹಿತಿ ಶ್ರೀ ಸುಬ್ರಾಯ ಚೊಕ್ಕಾಡಿ ಅವರು ಆಯ್ಕೆಯಾಗಿದ್ದಾರೆ.
ಶ್ರೀ ಸುಬ್ರಾಯ ಚೊಕ್ಕಾಡಿ ಅವರು ತನ್ನ ನವಿರಾದ ಕಾವ್ಯ ಶೈಲಿಯಿಂದ ಕನ್ನಡ ಸಾರಸ್ವತ ಲೋಕದಲ್ಲಿ ಮನೆಮಾತಾಗಿದ್ದರೂ ಅವರ ಹೆಸರು ಕೇಳಿದೊಡನೆ ಜನರಿಗೆ ಫಕ್ಕನೆ ನೆನಪಾಗುವುದು ಅವರ ‘ಮುನಿಸು ತರವೆ ಮುಗುದೆ, ಹಿತವಾಗಿ ನಗಲು ಬಾರದೆ’ ಎಂಬ ಜನಪ್ರಿಯ ಕವನ.
ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್ ವತಿಯಿಂದ ನೀಡಲಾಗುತ್ತಿರುವ ಈ ಪ್ರಶಸ್ತಿಯು ಈ ಬಾರಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಆರು ಮಂದಿ ಗಣ್ಯರಿಗೆ ನೀಡಲಾಗುತ್ತದೆ.
ಪ್ರಶಸ್ತಿ ಪುರಸ್ಕೃತರಲ್ಲಿ ಸುಬ್ರಾಯ ಚೊಕ್ಕಾಡಿ (ಕಾವ್ಯ), ಸಂಧ್ಯಾ ಎಸ್.ಪೈ (ಶಿಶು ಸಾಹಿತ್ಯ), ಎಸ್.ಆರ್.ವಿಜಯಶಂಕರ (ವಿಮರ್ಶೆ), ಪುರುಷೋತ್ತಮ ಬಿಳಿಮಲೆ (ಸಂಶೋಧನೆ), ಕೇಶವರೆಡ್ಡಿ ಹಂದ್ರಾಳ (ಕಥೆ), ಸ.ರಘುನಾಥ (ಸೃಜನಶೀಲ) ಒಳಗೊಂಡಿದ್ದಾರೆ. ಪ್ರಶಸ್ತಿಯು ತಲಾ ರೂ. 25,000/- ನಗದು, ಮಾಸ್ತಿ ಪ್ರಶಸ್ತಿ ಫಲಕ ಮತ್ತು ಸನ್ಮಾನವನ್ನು ಒಳಗೊಂಡಿದೆ.
ಬೆಂಗಳೂರಿನ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಮಾರ್ಚ್ 27ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್ ನ ಅಧ್ಯಕ್ಷ ಮಾವಿನಕೆರೆ ರಂಗನಾಥನ್ ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು
- ಕಾಸರಗೋಡಿನ ಮಸೀದಿ ಪರಿಸರದ ಮಣ್ಣು ತೆಗೆದ ಜೆಸಿಬಿಗೆ 45 ಲಕ್ಷ ದಂಡ; ಬಡ ಕುಟುಂಬ ಸಂಕಷ್ಟದಲ್ಲಿ – ಕಬ್ರಿಸ್ತಾನ್ ಭೂಮಿಯ ಉಸ್ತುವಾರಿ ಮಸೀದಿ ಅಧಿಕಾರಿಗಳಿಗೆ ಶಿಕ್ಷೆ ಇಲ್ಲ