ಇಂದು ಮತ್ತು ನಾಳೆ (ಫೆಬ್ರವರಿ 21 ಮತ್ತು 22) ಶ್ರೀ ಕ್ಷೇತ್ರ ಒಡಿಯೂರಿನಲ್ಲಿ ತುಳುನಾಡ ಜಾತ್ರೆ ಶ್ರೀ ಒಡಿಯೂರು ರಥೋತ್ಸವ ನಡೆಯಲಿದೆ. ಜಾತ್ರೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿದೆ.
ಈ ಸಂದರ್ಭದಲ್ಲಿ ಇಪ್ಪತ್ತೊಂದನೇ ತುಳು ಸಾಹಿತ್ಯ ಸಮ್ಮೇಳನವೂ ಜರಗಲಿದೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ.
ಫೆಬ್ರವರಿ 21ರಂದು ಬೆಳಿಗ್ಗೆ 9.30ಕ್ಕೆ ತುಳು ಸಾಹಿತ್ಯ ಸಮ್ಮೇಳನದ ಮೆರವಣಿಗೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಸಂಜೆ ಪಾವಂಜೆ ಮೇಳದವರಿಂದ ‘ಶ್ರೀ ಒಡಿಯೂರು ಕ್ಷೇತ್ರ ಮಹಾತ್ಮೆ’ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಫೆಬ್ರವರಿ 22ರಂದು ಬೆಳಿಗ್ಗೆಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ 6 ಘಂಟೆಯಿಂದ ಶ್ರೀ ದತ್ತಾಂಜನೇಯ ದೇವರ ವೈಭವದ ರಥಯಾತ್ರೆ ನಡೆಯಲಿದೆ.
ಸಂಜೆ 6 ಘಂಟೆಯಿಂದ ಕನ್ಯಾನ ಸದ್ಗುರು ನಿತ್ಯಾನಂದ ಮಂದಿರದ ಬಳಿ ಪಾವಂಜೆ ಮೇಳದವರಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ನಡೆಯಲಿದೆ. ಕಾರ್ಯಕ್ರಮದ ವಿವರ ಕೆಳಗೆ ಕೊಡಲಾಗಿದೆ


