ಹಿರಿಯ ವಿದ್ವಾಂಸ, ಸಾಹಿತಿ ಲಕ್ಷ್ಮೀಶ ತೋಳ್ಪಾಡಿ, ಪುತ್ತೂರು ಅವರಿಗೆ ಪ್ರತಿಷ್ಠಿತ ವಿ ಕೃ ಗೋಕಾಕ್ ಪ್ರಶಸ್ತಿ ನೀಡಲಾಗುತ್ತಿದೆ.
ಭಾರತೀಯ ವಿದ್ಯಾಭವನ ಬೆಂಗಳೂರು ಮತ್ತು ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಲಕ್ಷ್ಮೀಶ ತೋಳ್ಪಾಡಿಯವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಭಾರತೀಯ ವಿದ್ಯಾಭವನದಲ್ಲಿ 22.02.2021ರ ಸೋಮವಾರ ಬೆಳಗ್ಗೆ 11ಘಂಟೆಗೆ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಕಾರ್ಯಕ್ರಮದ ವಿವರವನ್ನು ಈ ಕೆಳಗೆ ಕೊಡಲಾಗಿದೆ.
