ಮಾರ್ಚ್ 6, 2021, ಶನಿವಾರದಂದು ಸಂಜೆ 4 ಘಂಟೆಗೆ ಕಲ್ಲುಗುಂಡಿ ಶಾಲಾ ವಠಾರದಲ್ಲಿ ಆರಂಭವಾದ ಸಂಪಾಜೆ ಯಕ್ಷೋತ್ಸವದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಶ್ರೀ ಸುಣ್ಣಂಬಳ ವಿಶ್ವೇಶ್ವರ ಭಟ್ಟರಿಗೆ ಸನ್ಮಾನ, ಭಾಗವತತ್ರಯರಾದ ಶ್ರೀ ಪದ್ಯಾಣ ಗಣಪತಿ ಭಟ್, ಶ್ರೀ ಪುತ್ತಿಗೆ ರಘುರಾಮ ಹೊಳ್ಳ, ಶ್ರೀ ದಿನೇಶ ಅಮ್ಮಣ್ಣಾಯ ಇವರಿಗೆ ಕೇಶವಾನಂದ ಭಾರತೀ ಶಿಷ್ಯ ಭಾಗವತ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀ ಎಡನೀರು ಮಠದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮಿಗಳವರು ಪ್ರಶಸ್ತಿ ಪ್ರದಾನ ಮಾಡಿ ಆಶೀರ್ವದಿಸಿದರು.



ಭಾಗವತತ್ರಯರಾದ ಶ್ರೀ ಪದ್ಯಾಣ ಗಣಪತಿ ಭಟ್, ಶ್ರೀ ದಿನೇಶ ಅಮ್ಮಣ್ಣಾಯ, ಶ್ರೀ ಪುತ್ತಿಗೆ ರಘುರಾಮ ಹೊಳ್ಳ ಇವರಿಗೆ ಕೇಶವಾನಂದ ಭಾರತೀ ಶಿಷ್ಯ ಭಾಗವತ ಪ್ರಶಸ್ತಿ