ಕಳೆದ ವರ್ಷ ನಿಧನ ಹೊಂದಿದ ಬಡಗತಿಟ್ಟು ಯಕ್ಷಗಾನದ ಪ್ರಸಿದ್ಧ ಭಾಗವತ ನಗರ ಸುಬ್ರಹ್ಮಣ್ಯ ಆಚಾರ್ ಅವರ ಪತ್ನಿ ಶ್ರೀಮತಿ ಸರಸ್ವತಿ ಆಚಾರ್ ಅವರಿಗೆ ಯಕ್ಷಗಾನ ಕಲಾರಂಗದ ವತಿಯಿಂದ ರೂಪಾಯಿ 25 ಸಾವಿರ ನೆರವನ್ನು ನೇಜಾರಿನಲ್ಲಿರುವ ಅವರ ಮನೆಗೆ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ತೆರಳಿ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ಅವರು ನೀಡಿದರು.
ಅವರ ಪುತ್ರಿ ಸೀಮಾಳ ವಿದ್ಯಾಭ್ಯಾಸದ ಸಂಪೂರ್ಣ ವೆಚ್ಚವನ್ನು ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಭರಿಸುತ್ತಿದೆ. ಇದೇ ಸಂದರ್ಭದಲ್ಲಿ ಸೆಲ್ಕೋ ಸಂಸ್ಥೆಯ ವತಿಯಿಂದ ನೀಡಲ್ಪಟ್ಟ ಸೆಲ್ಕೋ ಸೋಲಾರ್ ಹೊಲಿಗೆ ಯಂತ್ರವನ್ನು ಸಂಸ್ಥೆಯ ಎ.ಜಿ.ಎಂ. ಗುರುಪ್ರಕಾಶ್ ಶೆಟ್ಟಿಯವರು ಹಸ್ತಾಂತರಿಸಿದರು.
ಕಲಾರಂಗದ ಪದಾಧಿಕಾರಿಗಳ ತಂಡದಲ್ಲಿ ಉಪಾಧ್ಯಕ್ಷ ಎಸ್.ವಿ.ಭಟ್, ಕಾರ್ಯದರ್ಶಿ ಮುರಲಿ ಕಡೆಕಾರ್, ಜತೆ ಕಾರ್ಯದರ್ಶಿಗಳಾದ ನಾರಾಯಣ ಎಂ. ಹೆಗಡೆ, ಎಚ್. ಎನ್. ಶೃಂಗೇಶ್ವರ ಹಾಗೂ ಎಚ್.ಎನ್. ವೆಂಕಟೇಶ್ ಉಪಸ್ಥಿತರಿದ್ದರು.
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು
- ಕಾಸರಗೋಡಿನ ಮಸೀದಿ ಪರಿಸರದ ಮಣ್ಣು ತೆಗೆದ ಜೆಸಿಬಿಗೆ 45 ಲಕ್ಷ ದಂಡ; ಬಡ ಕುಟುಂಬ ಸಂಕಷ್ಟದಲ್ಲಿ – ಕಬ್ರಿಸ್ತಾನ್ ಭೂಮಿಯ ಉಸ್ತುವಾರಿ ಮಸೀದಿ ಅಧಿಕಾರಿಗಳಿಗೆ ಶಿಕ್ಷೆ ಇಲ್ಲ