ಸರಕಾರ 6ನೆಯ ತರಗತಿ ಹಾಗೂ ಆರರಿಂದ ಮೇಲಿನ ತರಗತಿಗಳನ್ನು ಮಾತ್ರ ಆರಂಭಿಸಲು ಅನುಮತಿ ನೀಡಿರುವುದರಿಂದ 1ರಿಂದ 5ನೆಯ ತರಗತಿಗಳನ್ನು ನಡೆಸಿದರೆ ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶ್ರೀ ಎಸ್ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ನಿರ್ದೇಶನದ ಪ್ರಕಾರ ಸರಕಾರ 6ನೆಯ ತರಗತಿ ಹಾಗೂ ಆರರಿಂದ ಮೇಲಿನ ತರಗತಿಗಳನ್ನು ಮಾತ್ರ ಆರಂಭಿಸಲು ಅನುಮತಿ ನೀಡಿದೆ. ಆದರೆ ಕೆಲವು ಶಿಕ್ಷಣ ಸಂಸ್ಥೆಗಳು 1ರಿಂದ 5ನೆಯ ತರಗತಿಗಳನ್ನು ಅನಧಿಕೃತವಾಗಿ ನಡೆಸುತ್ತಿವೆ ಎಂದು ದೂರುಗಳು ಬರುತ್ತಿವೆ.
ಈ ಬಗ್ಗೆ ಮಾಧ್ಯಮಗಳಲ್ಲಿಯೂ ವರದಿಗಳು ಬರುತ್ತಿವೆ. ಆದುದರಿಂದ ಅಂತಹಾ ಶಾಲೆಗಳ ವಿರುದ್ಧ ಸೂಕ್ತ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಿಕ್ಷಣ ಸಚಿವರು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
1ರಿಂದ 5ನೆಯ ತರಗತಿಗಳನ್ನು ಅನಧಿಕೃತವಾಗಿ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಸಚಿವ ಸುರೇಶ್ ಕುಮಾರ್ ಅವರು ಇಲಾಖಾ ಆಯುಕ್ತರುಗಳಿಗೆ ಸೂಚಿಸಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

