Saturday, January 18, 2025
Homeಸುದ್ದಿಕುರಿಯ ವಿಠಲ ಶಾಸ್ತ್ರಿ, ನೆಡ್ಲೆ ನರಸಿಂಹ ಭಟ್, ಕರವೋಳು ದೇರಣ್ಣ ಶೆಟ್ಟಿ ಸಂಸ್ಮರಣೆ, ಪ್ರಶಸ್ತಿ ಪ್ರದಾನ

ಕುರಿಯ ವಿಠಲ ಶಾಸ್ತ್ರಿ, ನೆಡ್ಲೆ ನರಸಿಂಹ ಭಟ್, ಕರವೋಳು ದೇರಣ್ಣ ಶೆಟ್ಟಿ ಸಂಸ್ಮರಣೆ, ಪ್ರಶಸ್ತಿ ಪ್ರದಾನ

ಕುರುಡು ಪದವು ಉಪ್ಪಳದ ಕುರಿಯ ವಿಠಲ ಶಾಸ್ತ್ರಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಸಂಸ್ಥೆಯು ಪ್ರತಿವರ್ಷದಂತೆ ಈ ಬಾರಿ ಪದ್ಯಾಣದ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಯಕ್ಷಗಾನದ ತೆಂಕುತಿಟ್ಟಿನ ಅಗ್ರಮಾನ್ಯ ಕಲಾವಿದರಾದ ಕುರಿಯ ವಿಠಲ ಶಾಸ್ತ್ರಿ, ನೆಡ್ಲೆ ನರಸಿಂಹ ಭಟ್, ಕರವೋಳು ದೇರಣ್ಣ ಶೆಟ್ಟಿಯವರ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಇತ್ತೀಚೆಗೆ ಸಂಘಟಿಸಿತು.

ಕೋಟದ ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕ ಎಚ್. ಶ್ರೀಧರ ಹಂದೆಯವರಿಗೆ ಕುರಿಯ ವಿಠಲ ಶಾಸ್ತ್ರಿ ಸಂಸ್ಮರಣಾ ಪ್ರಶಸ್ತಿ, ತೆಂಕು ಬಡಗಿನ ಖ್ಯಾತ ಹಾಸ್ಯಗಾರ ಪೆರುವಡಿ ನಾರಾಯಣ ಭಟ್ ಅವರಿಗೆ ಕರೋಳು ದೇರಣ್ಣ ಶೆಟ್ಟಿ ಸಂಸ್ಮರಣಾ ಪ್ರಶಸ್ತಿ, ಯಕ್ಷ ಛಾಂದಸ, ಪ್ರಸಂಗ ಕವಿ ಗಣೇಶ ಕೊಲೆಕಾಡಿ ಅವರಿಗೆ ನೆಡ್ಲೆ ನರಸಿಂಹ ಭಟ್ ಸಂಸ್ಮರಣ ಪ್ರಶಸ್ತಿಯನ್ನಿತ್ತು ಗೌರವಿಸಲಾಯಿತು.

ವೇದಮೂರ್ತಿ ಮುಗುಳಿ ತಿರುಮಲೇಶ್ವರ ಭಟ್ ಸಭಾಧ್ಯಕ್ಷತೆ ವಹಿಸಿದ್ದರು. ಕರ್ಣಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾದ ಯೋಗೀಶ್ ರಾವ್ ಚಿಗುರುಪಾದೆ ಸಂಸ್ಮರಣ ಭಾಷಣ ಮಾಡಿದರು. ನಿವೃತ್ತ ಪ್ರಾಧ್ಯಾಪಕ, ತಾಳಮದ್ದಳೆ ಅರ್ಥಧಾರಿ ಜಿ. ಕೆ. ಭಟ್ ಸೇರಾಜೆ ಅಭಿನಂದನಾ ಮಾತುಗಳನ್ನಾಡಿದರು.ಸತೀಶ್ ಆಳ್ವ ಇರಾ, ಸೇರಾಜೆ ಸತ್ಯನಾರಾಯಣ ಭಟ್ ಶುಭಾಶಂಸನೆಗೈದರು. ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರಿ, ಸಾಹಿತಿ ಜನಾರ್ದನ ಹಂದೆ ಮಂಗಳೂರು ಉಪಸ್ಥಿತರಿದ್ದರು.

ಕುರಿಯ ಗೋಪಾಲಕೃಷ್ಣ ಶಾಸ್ತ್ರಿ ಸ್ವಾಗತಿಸಿದರು. ಸೇರಾಜೆ ಶ್ರೀನಿವಾಸ ಭಟ್ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ಮೊದಲು ವಿದ್ಯಾ ಜಯರಾಂ ಮತ್ತು ಬಳಗದವರಿಂದ ಶಾಸ್ತ್ರೀಯ ಸಂಗೀತ ಮತ್ತು ಬಳಿಕ ಕುರಿಯ ವಿಠಲ ಶಾಸ್ತ್ರಿ ಸ್ಮಾರಕ ಲಲಿತ ಕೇಂದ್ರದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ ನಡೆಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments