Friday, November 22, 2024
Homeಯಕ್ಷಗಾನ12ನೇ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ - ಬಿ.ಜಯಶ್ರೀ ಮತ್ತು ಸುಬ್ರಾಯ ಭಾಗವತ ಕಪ್ಪೆಕೆರೆಯವರಿಗೆ ಪ್ರಶಸ್ತಿ 

12ನೇ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ – ಬಿ.ಜಯಶ್ರೀ ಮತ್ತು ಸುಬ್ರಾಯ ಭಾಗವತ ಕಪ್ಪೆಕೆರೆಯವರಿಗೆ ಪ್ರಶಸ್ತಿ 

ಈ ಬಾರಿಯ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ – 2021 ಇದೇ ಬರುವ ಏಪ್ರಿಲ್ 2 ಮತ್ತು 3ರಂದು ನಡೆಯಲಿದೆ. ಎರಡು ದಿನಗಳ ಕಾಲ ನಡೆಯಲಿರುವ ಈ ನಾಟ್ಯೋತ್ಸವ  ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಇದರ ಸಂಘಟನೆಯಲ್ಲಿ ನಡೆಯುವ ಈ ಕಾರ್ಯಕ್ರಮ ಕಳೆದ ಹಲವಾರು ವರ್ಷಗಳಿಂದಲೂ  ಯಕ್ಷಗಾನ ಮಾತ್ರವಲ್ಲದೆ ಇತರ ಕಲಾ ಪ್ರಾಕಾರಗಳಿಗೂ ವೇದಿಕೆ ಹಾಗೂ ಆಶ್ರಯ ನೀಡುತ್ತಾ ಇದೆ. 
 

ಈ ಸಾಲಿನ  “ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ-12”  02.04.2021 ಮತ್ತು 03.04.2021 ರಂದು ಹೊನ್ನಾವರ ತಾಲೂಕಿನ ಗುಣವಂತೆಯ ಯಕ್ಷಾಂಗಣದಲ್ಲಿ ನಡೆಯಲಿದೆ. ನಾಟ್ಯೋತ್ಸವದಲ್ಲಿ  ಸಂಗೀತ, ನೃತ್ಯ, ಜಾನಪದ ಮುಂತಾದ ವಿವಿಧ ಪ್ರಕಾರಗಳ ವಿಶಿಷ್ಟ ಕಲಾತಂಡಗಳು, ಭಾಗವಹಿಸುವುದು ಮಾತ್ರವಲ್ಲದೆ  ಕಲಾವಿದರಿಗೆ ಸನ್ಮಾನ, ವಿಚಾರ ಗೋಷ್ಠಿ, ನೃತ್ಯ, ಪ್ರಾತ್ಯಕ್ಷಿಕೆ ಮುಂತಾದವಿಶಿಷ್ಟ ಕಾರ್ಯಕ್ರಮಗಳು ನಡೆಯಲಿವೆ.

ಈ ಬಾರಿಯ  ‘ಕೆರೆಮನೆ ಶಿವರಾಮ ಹೆಗಡೆ ಪ್ರಶಸ್ತಿ’ ಹಾಗೂ ‘ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿ’ ಪುರಸ್ಕೃತರ ಹೆಸರನ್ನು ಪ್ರಕಟಿಸಲಾಗಿದೆ.  “ಕೆರೆಮನೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿ”ಗೆ  ರಂಗಭೂಮಿ ಕಲಾವಿದೆ ಬಿ.ಜಯಶ್ರೀ ಹಾಗೂ  “ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿ”ಗೆ  ಯಕ್ಷಗಾನದ ಹಿರಿಯ ಭಾಗವತರಾದ ಶ್ರೀ ಸುಬ್ರಾಯ ಭಾಗವತ ಕಪ್ಪೆಕೆರೆ ಅವರ ಹೆಸರನ್ನು ಆಯ್ಕೆ ಮಾಡಲಾಗಿದೆ ಎಂದು ನಾಟ್ಯೋತ್ಸವ ಸಮಿತಿಯ ಕಾರ್ಯಧ್ಯಕರಾದ ಶ್ರೀ ಲಕ್ಷ್ಮೀನಾರಾಯಣ ಕಾಶಿ, ಶಿವಮೊಗ್ಗ ಹಾಗೂ ನಿರ್ದೇಶಕರಾದ ಕೆರೆಮನೆ ಶಿವಾನಂದ ಹೆಗಡೆ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments