ಶ್ರೀ ಮಹಾಲಕ್ಷ್ಮಿ ಭಜನಾ ಮಂದಿರ, ದೊಡ್ಡಡ್ಕ ಇದರ 28 ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಬೆಳಿಗ್ಗೆ ಗಣಪತಿ ಹವನ, ಮಹಾಲಕ್ಷ್ಮಿ ಪೂಜೆ, ಶ್ರೀ ನರಹರಿ ಭಟ್ ಪಾಲೆಚ್ಚಾರು ಇವರಿಂದ ಕಥಾವಾಚನ , ಮಹಾಪೂಜೆ, ಅನ್ನಸಂತರ್ಪಣೆ ,ಭಜನಾ ಕಾರ್ಯಗಳು ನಡೆದವು.
ಧಾರ್ಮಿಕ ಸಭಾ ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ನಿವೃತ್ತ ಅಧ್ಯಾಪಕ ಶ್ರೀ ನರಹರಿ ಭಟ್ ಪಾಲೆಚ್ಚಾರು ವಹಿಸಿದ್ದರು. ಅತಿಥಿಗಳಾಗಿ ನ್ಯಾಯವಾದಿ ಶ್ರೀ ಚೇತನ್ ನಾಯಕ್ ಸಾಮೇತಡ್ಕ, ಸಂಚಾರಿ ಪೊಲೀಸ್ ಉಪ-ನಿರೀಕ್ಷಕರಾದ ಶ್ರೀ ರಾಮ ನಾಯ್ಕ ಗೆಣಸಿನಕುಮೇರು,
ಉಪಸ್ಥಿತರಿದ್ದರು.
ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ಜಗದೀಶ್ ಭಂಡಾರಿ, ಗೆಣಸಿನ ಕುಮೇರು ಪ್ರಸ್ತಾವಿಸಿ, ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀ ವೆಂಕಟಕೃಷ್ಣ ಭಟ್ ವರದಿ ವಾಚಿಸಿ , ಲೆಕ್ಕಪತ್ರ ಮಂಡಿಸಿದರು. ಮಂದಿರದ ಸೇವಾಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಸೇಸಪ್ಪ ನಾಯ್ಕ್ ವಂದನಾರ್ಪಣೆಗೈದರು.
ಆ ಬಳಿಕ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ, ಹನುಮಗಿರಿ ಇವರಿಂದ ‘ಓಂ ನಮಃ ಶಿವಾಯ, ರಕ್ತರಾತ್ರಿ’ ಎಂಬ ಯಕ್ಷಗಾನ ಬಯಲಾಟ ಜರಗಿತು.
- ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ – ಚಂಪಾಷಷ್ಠಿ ಮಹೋತ್ಸವ 27-11-2024ರಿಂದ 12-12-2024ರ ವರೆಗೆ
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ