ಶ್ರೀ ಕಡಬ ನಾರಾಯಣ ಆಚಾರ್ಯರದು ತೆಂಕುತಿಟ್ಟಿನ ಹಿಮ್ಮೇಳದ ಒಂದು ಪ್ರಖ್ಯಾತ ಹೆಸರು. ಸುಮಾರು 30ಕ್ಕೂ ಹೆಚ್ಚು ವರ್ಷಗಳ ಕಾಲ ಖ್ಯಾತ ಮದ್ದಳೆಗಾರರಾಗಿ ಯಕ್ಷಗಾನ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆಗಳನ್ನು ಸಲ್ಲಿಸಿದವರು. ಅವರು ಅಸ್ತಂಗತರಾದ ನಂತರ ಅವರ ಸ್ಥಾನವನ್ನು ಸಮರ್ಥವಾಗಿ ತುಂಬಿದವರು ಅವರ ಸುಪುತ್ರರಾದ ಕಡಬ ಶ್ರೀ ವಿನಯ ಆಚಾರ್ಯ. ಆದರೆ ವಿಧಿಲಿಖಿತವನ್ನು ತಪ್ಪಿಸುವವರಾರು? ಕಡಬ ವಿನಯ ಆಚಾರ್ಯರೂ ಯಕ್ಷರಂಗದ ಮದ್ದಳೆಗಾರರಾಗಿ ಸುಮಾರು 15 ವರ್ಷಗಳ ಕಾಲ ಸೇವೆ ಸಲ್ಲಿಸಿ ತಮ್ಮ ಪ್ರಸಿದ್ಧಿಯ ಉತ್ತುಂಗದಲ್ಲಿರುವಾಗಲೇ ಸಣ್ಣ ವಯಸ್ಸಿನಲ್ಲಿಯೇ ಈ ಲೋಕದ ಯಾತ್ರೆಯನ್ನು ಮುಗಿಸಿದರು.
ಶ್ರೀ ಕಡಬ ನಾರಾಯಣ ಆಚಾರ್ಯ ಮತ್ತು ಶ್ರೀ ಕಡಬ ವಿನಯ ಆಚಾರ್ಯರು ಯಕ್ಷಗಾನಕ್ಕೆ ಸಲ್ಲಿಸಿದ ಅಪೂರ್ವ ಸೇವೆಯನ್ನು ಮತ್ತು ಗಳಿಸಿದ ಕೀರ್ತಿಯನ್ನು ಮುಂದಿನ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಇವರಿಬ್ಬರ ಸ್ಮರಣಾರ್ಥ ಪ್ರತಿ ವರ್ಷವೂ ಯಕ್ಷಗಾನ ಕ್ಷೇತ್ರದಲ್ಲಿ ಅಪೂರ್ವ ಸಾಧನೆಯನ್ನು ಮಾಡಿದ ಕಲಾವಿದರನ್ನು ಗುರುತಿಸಿ ಅವರನ್ನು ಪ್ರಶಸ್ತಿಯ ಮೂಲಕ ಗೌರವಿಸಲಾಗುತ್ತಿದೆ.

ಈ ಬಾರಿಯ ಕಡಬ ಸಂಸ್ಮರಣಾ ಪ್ರಶಸ್ತಿಯನ್ನು ಖ್ಯಾತ ಹಿರಿಯ ಮದ್ದಳೆಗಾರರಾದ ಶ್ರೀ ಮಿಜಾರು ಮೋಹನ ಶೆಟ್ಟಿಗಾರರಿಗೆ ನೀಡಿ ಗೌರವಿಸಲಾಗುವುದು. ಕಡಬ ಸಂಸ್ಮರಣಾ ಸಮಿತಿಯ ಎರಡನೆಯ ವರ್ಷದ ‘ಕಡಬದ್ವಯ ಸಂಸ್ಮರಣ ಪ್ರಶಸ್ತಿ’ ಪ್ರದಾನ ಸಮಾರಂಭ ದಿನಾಂಕ 03.10.2021ರ ಆದಿತ್ಯವಾರ ಅಪರಾಹ್ನ ಸಮಯ 2ರಿಂದ ಸಂಜೆ ಘಂಟೆ 6.30ರ ವರೆಗೆ ನಡೆಯಲಿದೆ. ಈ ಕಾರ್ಯಕ್ರಮವು ಯಕ್ಷಗಾನ ಬಯಲಾಟ ಪ್ರದರ್ಶನದೊಂದಿಗೆ ಮೂಡಬಿದಿರೆಯ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ರಾಜಾಂಗಣದಲ್ಲಿ ನಡೆಯಲಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
