ಉಡುಪಿಯ ಯಕ್ಷಗಾನ ಕಲಾರಂಗ ಪೆರ್ಲ ಕೃಷ್ಣ ಭಟ್ ಮತ್ತು ಮಟ್ಟಿ ಮುರಲೀಧರ ರಾವ್ ನೆನಪಿನಲ್ಲಿ ತಾಳಮದ್ದಲೆ ಅರ್ಥಧಾರಿಗಳಿಗೆ ನೀಡುವ‘ ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ಅನುಕ್ರಮವಾಗಿ ವಿದ್ವಾನ್ ಉಮಕಾಂತ್ ಭಟ್ ಮತ್ತು ಸುರತ್ಕಲ್ ವಾಸುದೇವ ರಾವ್ ಆಯ್ಕೆಯಾಗಿದ್ದಾರೆ.
ಉಮಾಕಾಂತ್ ಭಟ್ ಇವರು ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರಾಗಿದ್ದು ಪ್ರಸಿದ್ಧ ಅರ್ಥಧಾರಿಯಾಗಿ ಮಾನಿತರು. ಸಂಸ್ಕೃತ ಮತ್ತು ಕನ್ನಡ ಭಾಷೆಗಳಲ್ಲಿ ವಿಶೇಷ ಪಾಂಡಿತ್ಯ ಆಗಾಧ ಪುರಾಣ ಜ್ಞಾನ ಹೊಂದಿದವರು. ಪ್ರವಚನಕಾರರಾಗಿ ಪರಿಚಿತರು.
ನಿವೃತ್ತ ಅಧ್ಯಾಪಕರಾದ ಸುರತ್ಕಲ್ ವಾಸುದೇವ ರಾವ್ ಅರ್ಥಧಾರಿಯಾಗಿ, ಯಕ್ಷಗಾನ ನಿರ್ದೇಶಕರಾಗಿ ಸಾಧನೆಗೈದವರು. ಮಹಿಳಾ ತಾಳಮದ್ದಲೆ ಸಂಘಟನೆಯ ಸ್ಥಾಪಕರಾಗಿಯೂ ಗುರುತಿಸಲ್ಪಟ್ಟಿದ್ದಾರೆ. ಪ್ರಶಸ್ತಿಯು ಪ್ರಶಸ್ತಿ ಪತ್ರ ಮತ್ತು ತಲಾ 20000/- ರೂಪಾಯಿ ನಗದನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭ ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ ಸೆಪ್ಟೆಂಬರ್ 26, ಭಾನುವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂಪನ್ನಗೊಳ್ಳಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಮ್. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
