
ಕಡಬ ಸಂಸ್ಮರಣಾ ಸಮಿತಿಯ ಎರಡನೆಯ ವರ್ಷದ ‘ಕಡಬದ್ವಯ ಸಂಸ್ಮರಣ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 03.10.2021ರ ಆದಿತ್ಯವಾರ ಪ್ರಶಸ್ತಿ’ ಪ್ರದಾನ ಸಮಾರಂಭ ಮತ್ತು ಯಕ್ಷಗಾನ ಬಯಲಾಟ ಪ್ರದರ್ಶನದೊಂದಿಗೆ ಮೂಡಬಿದಿರೆಯ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಈ ಬಾರಿಯ ಕಡಬ ಸಂಸ್ಮರಣಾ ಪ್ರಶಸ್ತಿಯನ್ನು ಖ್ಯಾತ ಹಿರಿಯ ಮದ್ದಳೆಗಾರರಾದ ಶ್ರೀ ಮಿಜಾರು ಮೋಹನ ಶೆಟ್ಟಿಗಾರರಿಗೆ ನೀಡಿ ಗೌರವಿಸಲಾಯಿತು.
ಕಡಬ ವಿನಯ ಆಚಾರ್ಯರು ಪೀಠಿಕೆ ಚೆಂಡೆ ಬಾರಿಸುವ ವೀಡಿಯೊ ಸುಕೇಶ್ ಭಟ್ ಅವರ ಯು ಟ್ಯೂಬ್ ಚಾನೆಲಿನಲ್ಲಿ ನೋಡಿ.