ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರವು ದಶಮ ಸಂಭ್ರಮದಲ್ಲಿದೆ. ಈ ದಶಮಾನೋತ್ಸವ ಸಮಾರಂಭದಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ದಶಮಾನೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ತೆಂಕು ಬಡಗು ತಿಟ್ಟಿನ ಹಿಮ್ಮೇಳ ಹಾಗೂ ಮುಮ್ಮೇಳ ಸೇರಿದಂತೆ ಹದಿನೈದು ಮಂದಿ ‘ದಶಮಾನೋತ್ಸವ ಪ್ರಶಸ್ತಿ’ಗೆ ಹಾಗೂ ಯಕ್ಷಗಾನ ಸಾಹಿತ್ಯ ಕ್ಷೇತ್ರದ ಇಬ್ಬರು ಸಾಧಕರು ‘ಕೃತಿ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.
ಮುಮ್ಮೇಳದ ಸಾಧಕರಾದ ಹಿರಿಯ ಯಕ್ಚಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟಿ, ಪೇತ್ರಿ ಮಾಧವ ನಾಯ್ಕ್, ಮುಖ್ಯಪ್ರಾಣ ಕಿನ್ನಿಗೋಳಿ, ಕೃಷ್ಣ ಯಾಜಿ ಬಳ್ಕೂರು, ಆರ್ಗೋಡು ಮೋಹನ್ ದಾಸ್ ಶೆಣೈ, ಶಿವರಾಮ ಜೋಗಿ, ಪೂಕಳ ಲಕ್ಷ್ಮೀನಾರಾಯಣ ಭಟ್, ಉಬರಡ್ಕ ಉಮೇಶ್ ಶೆಟ್ಟಿ, ಕುಂಬ್ಳೆ ಶ್ರೀಧರ ರಾವ್, ಹಿಮ್ಮೇಳ ಕ್ಷೇತ್ರದ ಸಾಧಕರಾದ ಸುಬ್ರಹ್ಮಣ್ಯ ಧಾರೇಶ್ವರ, ಕುರಿಯ ಗಣಪತಿ ಭಟ್ , ಪುತ್ತಿಗೆ ರಘುರಾಮ ಹೊಳ್ಳ, ದಿನೇಶ ಅಮ್ಮಣ್ಣಾಯ, ಪದ್ಯಾಣ ಶಂಕರನಾರಾಯಣ ಭಟ್, ಹರಿನಾರಾಯಣ ಬೈಪಾಡಿತ್ತಾಯ,
ಹಾಗೂ ಯಕ್ಷಗಾನ ಸಾಹಿತ್ಯ ಕ್ಷೇತ್ರದಲ್ಲಿ ಕೃತಿಗಳನ್ನು ರಚಿಸಿರುವ ಡಾ.ಉಪ್ಪಂಗಳ ಶಂಕರನಾರಾಯಣ ಭಟ್ ಹಾಗೂ ಡಾ.ಚಂದ್ರಶೇಖರ್ ದಾಮ್ಲೆ ಅವರು ದಶಮಾನೋತ್ಸವದ ‘ಕೃತಿ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.
ಅಲ್ಲದೆ ಈ ದಶಮಾನೋತ್ಸವದ ಸಂದರ್ಭದಲ್ಲಿ ಯಕ್ಷಗಾನಕ್ಕೆ ಹಾಗೂ ಯಕ್ಷಗಾನ ಕೇಂದ್ರದ ಬೆಳವಣಿಗೆಗೆ ಸಹಕಾರ ನೀಡಿದಂತಹ ಮಹನೀಯರನ್ನು ಕೇಂದ್ರದ ವತಿಯಿಂದ ಗೌರವ ಸನ್ಮಾನದೊಂದಿಗೆ ಗೌರವಿಸಲಾಗುವುದು. ನವೆಂಬರ್ ಕೊನೆಯ ವಾರದಲ್ಲಿ ನಡೆಯುವ ದಶಮಾನೋತ್ಸವ ಉದ್ಘಾಟನೆ ಸಮಾರಂಭದಲ್ಲಿ ಸಾಧಕರಿಗೆ ದಶಮಾನೋತ್ಸವ ಪ್ರಶಸ್ತಿ , ಹಾಗೂ ಗೌರವ ಸನ್ಮಾನ ನೀಡಿ ಗೌರವಿಸಲಾಗುವುದು ಎಂದು ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕರಾದ ಪ್ರೊ.ಶ್ರೀಪತಿ ಕಲ್ಲೂರಾಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ದಶಮ ಸಂಭ್ರಮ
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರವು ಪರಿಪೂರ್ಣ ರಂಗಭೂಮಿಯಾದ ಯಕ್ಷಗಾನ ಅಧ್ಯಯನ, ಪ್ರಕಟಣೆ, ಸಂವರ್ಧನೆ ಮತ್ತು ಸಂರಕ್ಷಣೆಗಾಗಿ ಮಂಗಳೂರು ವಿವಿಯಲ್ಲಿ ಅಸ್ತಿತ್ವಕ್ಕೆ ಬಂದಿದೆ. ಯಕ್ಷಗಾನದ ಕುರಿತಂತೆ ಅಧ್ಯಯನ ಮತ್ತು ಸಂಗ್ರಹ, ವಿಚಾರಸಂಕಿರಣ, ಪ್ರಚಾರೋಪನ್ಯಾಸ, ದಾಖಲಾತಿ, ಯಕ್ಷ ತರಬೇತಿ, ಪ್ರಾತ್ಯಕ್ಷಿಕೆ, ಯಕ್ಷಮಂಗಳ ಪ್ರಶಸ್ತಿ , ಪ್ರಚಾರೋಪನ್ಯಾಸ, ಕಲಾವಿದನಿಗೆ ಸಂಶೋಧಕರಿಗೆ , ವಿದ್ಯಾರ್ಥಿಗಳಿಗೆ ಮುಖ್ಯ ಆಕರವಾಗಬಲ್ಲ ಸುಸಜ್ಜಿತ ಗ್ರಂಥಾಲಯ, ಅನನ್ಯವಾದ ವಸ್ತುಸಂಗ್ರಹಾಲಯ ನಿರ್ಮಾಣ, ಸಹಯೋಗದ ಕಾರ್ಯಕ್ರಮಗಳು ಇಂತಹ ಬಹುಮುಖಿ ಉದ್ದೇಶ, ಕಾರ್ಯ ಯೋಜನೆಗಳೊಂದಿಗೆ ಕಳೆದ ಹತ್ತು ವರ್ಷಗಳಿಂದ ಮುನ್ನಡೆಯುತ್ತಿದ್ದು, ಈ ಬಾರಿ ದಶಮ ಸಂಭ್ರಮವನ್ನು ವೈಶಿಷ್ಟ್ಯಪೂರ್ಣವಾಗಿ ಆಚರಿಸಲು ನಿರ್ಧರಿಸಿದೆ.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions
ಕೊಂಗೋಟ್ ರಾಧಾಕೃಷ್ಣ ಭಟ್ಟರ ಯೂಟ್ಯೂಬ್ ಚಾನೆಲಿನ ವೀಡಿಯೋ