ಬಹುಶ್ರುತ ವಿದ್ವಾಂಸ ಹವ್ಯಾಸಿ ವೇಷಧಾರಿ, ಅರ್ಥಧಾರಿ, ಧಾರ್ಮಿಕ ಪ್ರವಚನಕಾರರಾದ ನಿವೃತ್ತ ಉಪನ್ಯಾಸಕ ಸಾಂತೂರು ಸದಾಶಿವ ರಾವ್ (86) 09-12-2021 ರಂದು ನಿಧನ ಹೊಂದಿದರು. ಅವರು ಪತ್ನಿ ಹಾಗೂ ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಆರು ದಶಕಗಳಿಗೂ ಅಧಿಕ ಕಾಲ ಯಕ್ಷಗಾನ ಅರ್ಥಧಾರಿಯಾಗಿ, ವೇಷಧಾರಿಯಾಗಿ ವಿಶೇಷ ಕೊಡುಗೆಯನ್ನು ಯಕ್ಷಗಾನ ಕ್ಷೇತ್ರಕ್ಕೆ ನೀಡಿದ್ದಾರೆ. ನೂರಾರು ಶಿಷ್ಯರನ್ನು ರೂಪಿಸಿದ್ದಾರೆ.
ಕಳೆದ ವರ್ಷ ಯಕ್ಷಗಾನ ಕಲಾರಂಗವು ಇವರಿಗೆ ಮಟ್ಟಿ ಮುರಲೀಧರರಾವ್ ಪ್ರಶಸ್ತಿ ನೀಡಿ ಗೌರವಿಸಿತ್ತು. ಅವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.