ಯಕ್ಷಗಾನ ಕಲಾವಿದ ಶಿವಮೊಗ್ಗ ಜಿಲ್ಲೆಯ ನರಸಿಂಹರಾಜಪುರ ನಿವಾಸಿ ಹೊಸಕೊಪ್ಪ ಶಿವರಾಮ ಶೆಟ್ಟಿ (69) 09-12-2021ರಂದು ನಿಧನ ಹೊಂದಿದರು. ಅವರು ಪತ್ನಿ ಹಾಗೂ ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ
ಗಂಭಿರ ಪುರುಷ ಪಾತ್ರಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದ್ದ ಶಿವರಾಮ ಶೆಟ್ಟಿಯವರು ತೆಂಕು-ಬಡಗು ಎರಡೂ ತಿಟ್ಟುಗಳಲ್ಲಿ ಸಮರ್ಥ ವೇಷಧಾರಿಯಾಗಿದ್ದರು. ಮಂದಾರ್ತಿ, ಸಾಲಿಗ್ರಾಮ, ಕಮಲಶಿಲೆ, ಗೋಳಿಗರಡಿ, ಮಾರಣಕಟ್ಟೆ, ನಾಗರಕೋಡಿಗೆ, ಸೌಕೂರು, ಹೊಸಳ್ಳಿ, ರಂಜದಕಟ್ಟೆ ಮೇಳಗಳಲ್ಲಿ ಕಲಾಸೇವೆಗೈದಿದ್ದರು.
ಕಟೀಲು ಮೇಳದಲ್ಲಿ ದೀರ್ಘಕಾಲ ಬಣ್ಣದ ವೇಷಧಾರಿಯಾಗಿ ಸೇವೆ ಗೈದ ಇವರು ಈ ವರ್ಷ ನಿವೃತ್ತರಾಗಿದ್ದರು. 2015ರಲ್ಲಿ ಉಡುಪಿಯ ಯಕ್ಷಗಾನ ಕಲಾರಂಗ ಅವರಿಗೆ ಡಾ. ಬಿ. ಬಿ. ಶೆಟ್ಟಿ ಸ್ಮರಣಾರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿ ನೀಡಿ ಗೌರವಿಸಿತ್ತು ಅವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು
- ಕಾಸರಗೋಡಿನ ಮಸೀದಿ ಪರಿಸರದ ಮಣ್ಣು ತೆಗೆದ ಜೆಸಿಬಿಗೆ 45 ಲಕ್ಷ ದಂಡ; ಬಡ ಕುಟುಂಬ ಸಂಕಷ್ಟದಲ್ಲಿ – ಕಬ್ರಿಸ್ತಾನ್ ಭೂಮಿಯ ಉಸ್ತುವಾರಿ ಮಸೀದಿ ಅಧಿಕಾರಿಗಳಿಗೆ ಶಿಕ್ಷೆ ಇಲ್ಲ