ಅಂಬಲಪಾಡಿ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿಯ 64ನೇ ವಾರ್ಷಿಕೋತ್ಸವವು ಮಾರ್ಚ್ 6, 2022 ಭಾನುವಾರ ಸಂಜೆ 6.00 ಗಂಟೆಗೆ ಅಂಬಲಪಾಡಿಯ ‘ಶ್ರೀ ಜನಾರ್ದನ ಮಂಟಪ’ದಲ್ಲಿ ಜರಗಲಿದೆ.
ಈ ಸಂದರ್ಭದಲ್ಲಿ ಮೂವರು ಸಾಧಕ ಕಲಾವಿದರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಕಿದಿಯೂರು ಜನಾರ್ದನ ಆಚಾರ್ಯ ಸ್ಮರಣಾರ್ಥ ಪ್ರಶಸ್ತಿಯನ್ನು ವಿದ್ವಾನ್ ಗಣಪತಿ ಭಟ್ ರಿಗೆ, ಕಪ್ಪೆಟ್ಟು ಬಾಬು ಶೆಟ್ಟಿಗಾರ್ ಸ್ಮರಣಾರ್ಥ ಪ್ರಶಸ್ತಿಯನ್ನು ಶ್ರೀ ತೋನ್ಸೆ ರಾಜೀವ ಇವರಿಗೆ ಹಾಗೂ ಕುತ್ಪಾಡಿ ಆನಂದ ಗಾಣಿಗ ಸ್ಮರಣಾರ್ಥ ಪ್ರಶಸ್ತಿಯನ್ನು ಶ್ರೀ ಪದ್ಮನಾಭ ಗಾಣಿಗ ಇವರಿಗೆ ಧರ್ಮದರ್ಶಿ ಡಾ. ನಿ.ಬೀ. ವಿಜಯ ಬಲ್ಲಾಳರ ಅಧ್ಯಕ್ಷತೆಯಲ್ಲಿ ಪ್ರದಾನ ಮಾಡಲಾಗುವುದು.
ಅಭ್ಯಾಗತರಾಗಿ ಶ್ರೀ ಎ. ಸಂಕಪ್ಪ, ವಿದ್ವಾನ್ ಅಡ್ವೆ ಲಕ್ಷ್ಮೀಶ ಆಚಾರ್ಯ ಹಾಗೂ ಶ್ರೀ ಬೇಗಾರು ಶಿವಕುಮಾರ್ ಭಾಗವಹಿಸಲಿರುವರು.
ಸಭೆಯ ಬಳಿಕ ನರಸಿಂಹ ತುಂಗ ಇವರ ನಿರ್ದೇಶನದಲ್ಲಿ ಬಾಲ ಕಲಾವಿದರಿಂದ ‘ಮೈಂದದ್ವಿವಿದ ಕಾಳಗ’ ಮತ್ತು ‘ರುಗ್ಮಾವತಿ ಕಲ್ಯಾಣ’ ಯಕ್ಷಗಾನ ಪ್ರದರ್ಶನಗೊಳ್ಳಲಿರುವುದು ಎಂದು ಮಂಡಳಿಯ ಅಧ್ಯಕ್ಷ ಕೆ. ಅಜಿತ್ ಕುಮಾರ್ ಮತ್ತು ಕಾರ್ಯದರ್ಶಿ ಸುನಿಲ್ ಕುಮಾರ್ ತಿಳಿಸಿರುತ್ತಾರೆ.