Friday, September 20, 2024
Homeಯಕ್ಷಗಾನಬೆಂಗಳೂರಿನ ಗಾನಸೌರಭ ಯಕ್ಷಗಾನ ಶಾಲೆಗೆ ನಿಡಂಬೂರು ಬೀಡುಬಲ್ಲಾಳ ಪ್ರಶಸ್ತಿ

ಬೆಂಗಳೂರಿನ ಗಾನಸೌರಭ ಯಕ್ಷಗಾನ ಶಾಲೆಗೆ ನಿಡಂಬೂರು ಬೀಡುಬಲ್ಲಾಳ ಪ್ರಶಸ್ತಿ

ಅಂಬಲಪಾಡಿ ದೇವಳದ ಧರ್ಮದರ್ಶಿಯಾಗಿ ಕಲೆ, ಸಂಸ್ಕೃತಿಯನ್ನು ವಿಶೇಷವಾಗಿ ಪ್ರೋತ್ಸಾಹಿಸುತ್ತಿದ್ದ ನಿ. ಬೀ. ಅಣ್ಣಾಜಿ ಬಲ್ಲಾಳರ ಹೆಸರಿನಲ್ಲಿ ಅವರ ಸುಪುತ್ರ ಡಾ. ನಿ. ಬೀ. ವಿಜಯ ಬಲ್ಲಾಳರು ಸ್ಥಾಪಿಸಿದ ‘ನಿಡಂಬೂರು ಬೀಡು ಬಲ್ಲಾಳ ಪ್ರಶಸ್ತಿ’ಗೆ ಎರಡು ದಶಕಗಳಿಂದ ಬೆಂಗಳೂರಿನಲ್ಲಿ ಯಕ್ಷಗಾನ ಕಲಿಕೆ, ಪ್ರದರ್ಶನ, ಪ್ರಚಾರಕ್ಕೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿರುವ ಗಾನಸೌರಭ ಯಕ್ಷಗಾನ ಶಾಲೆ ಆಯ್ಕೆಯಾಗಿದೆ.

ಪ್ರಶಸ್ತಿಯು ರೂಪಾಯಿ ಹತ್ತು ಸಾವಿರ ನಗದು ಪುರಸ್ಕಾರವನ್ನೊಳಗೊಂಡಿದೆ.

ಸುಮಾರು ಮೂವತ್ತು ವರ್ಷ ವಿವಿಧ ಮೇಳಗಳಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸಿದ ಶಿವ ಕುಮಾರ್ ಬೇಗಾರ್ ಅವರು ಈ ಸಂಸ್ಥೆ ಸ್ಥಾಪಿಸಿದ್ದು ಬೆಂಗಳೂರಿನ ಹಲವು ಕಡೆಗಳಲ್ಲಿ ತೆಂಕು ಬಡಗಿನ ಆಸಕ್ತ ಕಲಾವಿದರಿಗೆ ತರಬೇತಿ ನೀಡುತ್ತಾ ಈ ಕಲೆಯ ಸಂವರ್ಧನೆಗೆ ಕೆಲಸ ಮಾಡುತ್ತಿದೆ.

ಮಾರ್ಚ್ 6, 2022 ಭಾನುವಾರ ಕಂಬ್ಳಕಟ್ಟದ ಶ್ರೀ ಜನಾರ್ದನ ಮಂಟಪದಲ್ಲಿ ನಡೆಯುವ ಸಂಸ್ಥೆಯ 64ನೇ ವಾರ್ಷಿಕೋತ್ಸವದಂದು ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಸಂಸ್ಥೆಯ ಅಧ್ಯಕ್ಷ ಕೆ. ಅಜಿತ್ ಕುಮಾರ್, ಕಾರ್ಯದರ್ಶಿ ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments