ಬೆಂಗಳೂರಿನಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆಯ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಸಬ್ ಇನ್ಸ್ ಪೆಕ್ಟರ್ ಸುದರ್ಶನ್ ಸೌತ್ ಸೆನ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು.ಆತ್ಮಹತ್ಯೆಗೆ ಶರಣಾಗಿರುವ ಸಬ್ ಇನ್ಸ್ಪೆಕ್ಟರ್ ಸುದರ್ಶನ್(51) ಅವರು ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಕ್ಕೆ ಯಾವುದೇ ರೀತಿಯ ಮಾಹಿತಿ ಸಿಕ್ಕಿಲ್ಲ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
ಪ್ರಾಥಮಿಕ ತನಿಖೆ ವೇಳೆ ಸುದರ್ಶನ್ ಅವರು ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಲಾಗುತ್ತಿದೆ. ಈ ಹಿನ್ನೆಲೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.
