ಭೀಕರ ಮಳೆಯಿಂದಾಗಿ ರಸ್ತೆಯೆಲ್ಲಾ ಜಲಾವೃತವಾಗಿದ್ದು ಸ್ಕೂಟರಿನಲ್ಲಿ ಸಂಚರಿಸುತ್ತಿದ್ದ ಪೊಲೀಸ್ ಅಧಿಕಾರಿ ಹಾಗೂ ಅವರ ಪತ್ನಿ ಡ್ರೈನೇಜ್ ಗುಂಡಿಗೆ ಬಿದ್ದ ಘಟನೆ ಉತ್ತರ ಪ್ರದೇಶದಿಂದ ವರದಿಯಾಗಿದೆ.
ಪ್ರವಾಹದಿಂದ ನೀರು ತುಂಬಿ ದಾರಿಯೇ ಕಾಣದಂತಾಗಿದ್ದ ರಸ್ತೆಯಲ್ಲಿ ಪ್ರಯಣಿಸುತ್ತಿದ್ದ ಪೊಲೀಸ್ ಹಾಗೂ ಪತ್ನಿ ಸ್ಕೂಟರ್ ಸಮೇತವಾಗಿ ತೆರೆದ ಚರಂಡಿಗೆ ಬಿದ್ದಿದ್ದಾರೆ. ಘಟನೆ ನಡೆದದ್ದು ಉತ್ತರ ಪ್ರದೇಶದ ಅಲಿಘಡದಲ್ಲಿ. ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ಬಗ್ಗೆ ತಿಳಿಸಿದ ಚರಂಡಿಗೆ ಬಿದ್ದ ಪೊಲೀಸ್ ಅಧಿಕಾರಿ ದಯಾನಂದ್ ಸಿಂಗ್, ನಾವು ಸ್ಕೂಟರ್‌ನಲ್ಲಿ ಆಸ್ಪತ್ರೆಗೆ ಹೋಗುತ್ತಿದ್ದೆವು. ಮಳೆ ನೀರಿನಿಂದ ರಸ್ತೆ ತುಂಬಿದ್ದು, ನಮ್ಮ ಎದುರು ಚರಂಡಿ ಇದ್ದ ವಿಷಯ ತಿಳಿದಿರಲಿಲ್ಲ. ಹೀಗಾಗಿ ಸ್ಕೂಟರ್ ಸಮೇತ ಚರಂಡಿಯಲ್ಲಿ ಬಿದ್ದೆವು ಎಂದು ಹೇಳಿದ್ದಾರೆ.
ಚರಂಡಿಗೆ ಬಿದ್ದ ದಂಪತಿಯನ್ನು ಸ್ಥಳೀಯರು ತಕ್ಷಣವೇ ರಕ್ಷಿಸಿದ್ದಾರೆ. ದಂಪತಿ ಗುಂಡಿಗೆ ಬೀಳುವ ವೀಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೀಡಿಯೊವನ್ನು ನಿವೃತ್ತ ಐಎಎಸ್ ಅಧಿಕಾರಿ ಸೂರ್ಯ ಪ್ರತಾಪ್ ಸಿಂಗ್ ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು