Sunday, January 19, 2025
Homeಸುದ್ದಿಮಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಗೆ ಬೆಂಕಿ

ಮಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಗೆ ಬೆಂಕಿ

ಮಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಈ ದುರ್ಘಟನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ತಿಳಿದುಬಂದಿದೆ.

ಮಂಗಳೂರಿನ ನಾಗೂರಿನಲ್ಲಿ ಶುಕ್ರವಾರ ಮೇ 24 ರಂದು ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ಸುಟ್ಟು ಕರಕಲಾಗಿದೆ.ಓಕಿನಾವಾ ಸ್ಕೂಟರ್ ಡೀಲರ್‌ಶಿಪ್ ಆಗಿರುವ ಸ್ಮಾರ್ಟ್ ಸಿಟಿ ಮೋಟಾರ್ಸ್‌ನಲ್ಲಿ ಈ ದುರ್ಘಟನೆ ನಡೆದಿದೆ.

ಮಾಲೀಕ ಶೋರೂಂ ಮೇಲಿನ ಮನೆಯಲ್ಲಿ ವಾಸವಾಗಿದ್ದರು. ಅಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಶೋರೂಂನಿಂದ ಹೊಗೆ ಬರುತ್ತಿರುವುದನ್ನು ಅವರ ಪತ್ನಿ ಗಮನಿಸಿದ್ದರು ಎಂದು ವರದಿಯಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments