ಯುವವಾಹಿನಿ (ರಿ) ಬಜಪೆ ಘಟಕವು ಈ ಸಾಲಿನಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ ತತ್ವವನ್ನು ಅನುಷ್ಠಾನಕ್ಕೆ ತರುವರೇ ಮನೆ-ಮನೆಗಳಲ್ಲಿ ಭಜನಾ ಸೇವೆಯನ್ನು ಆಯೋಜಿಸಲು ನಿರ್ಧರಿಸಿರುವ ಪ್ರಕಾರ, ನಮ್ಮ ಘಟಕದ ಸದಸ್ಯರಿಂದ ಪ್ರಥಮ ಭಜನಾ ಸೇವೆಯು ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀಯುತ ವಿನೋದರ ಪೂಜಾರಿಯವರ ಮನೆಯಲ್ಲಿ ನೇರವೆರಿಸಲಾಯಿತು.
ಶ್ರೀ ನಾರಾಯಣ ಪೂಜಾರಿ, ಮೊಕ್ತೇಸರರು, ಶ್ರೀ ಕ್ಷೇತ್ರ ಸುಂಕದಕಟ್ಟೆ ಇವರು ದೀಪ ಬೆಳಗಿಸುವುದರ ಮೂಲಕ ಭಜನಾ ಸೇವೆಗೆ ಚಾಲನೆ ನೀಡಿದರು.
ಘಟಕದ ಅಧ್ಯಕ್ಷರಾದ ಶ್ರೀಮತಿ ಉಷಾ ಶಿವಾನಂದ್, ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀ ನಿರಂಜನ್ ಕರ್ಕೇರ ಹಾಗೂ ಮಾಜಿ ಅಧ್ಯಕ್ಷರುಗಳ ಮತ್ತು ಸದಸ್ಯರ ಉಪಸ್ಥಿತಿಯೊಂದಿಗೆ ಅತ್ಯಂತ ಅರ್ಥಪೂರ್ಣವಾಗಿ ನಡೆದ ಭಜನಾ ಸೇವೆಯು ಶ್ರೀ ಗುರುವರ್ಯರಿಗೆ ಪೂಜೆಯನ್ನು ನೆರವೇರಿಸಿ ಮಂಗಳ ಹಾಡಿನೊಂದಿಗೆ ಸಂಪನ್ನಗೊಂಡಿತು.
ಶ್ರೀಯುತ ವಿನೋದರ ಪೂಜಾರಿ ಮತ್ತು ಮನೆಯವರು ಸದಸ್ಯರಿಗೆ ಊಟೋಪಚಾರದ ವ್ಯವಸ್ಥೆ ಮಾಡಿದ್ದರು.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

