ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲಾದ್ಯಂತ ನಾಳೆ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳಿಗೆ ಶುಕ್ರವಾರ ದಿನಾಂಕ 01.07.2022ರಂದು ರಜೆ ಘೋಷಿಸಲಾಗಿದೆ.
ಈ ಸಂಬಂಧ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ. ಈಗಾಗಲೇ ಮಳೆಯ ರಭಸಕ್ಕೆ ಜಿಲ್ಲಾದ್ಯಂತ ನೆರೆ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿದೆ. ರಸ್ತೆಗಳೆಲ್ಲಾ ಜಲಾವೃತವಾಗಿದೆ.
ಟ್ರಾಫಿಕ್ ಜಾಮ್ ಮೊದಲಾದುವುಗಳಿಂದ ಸಾರಿಗೆ ಸಂಪರ್ಕ ಕಷ್ಟವಾಗುತ್ತಿದೆ. ಇದನ್ನು ಮನಗಂಡ ಜಿಲ್ಲಾಧಿಕಾರಿಯವರು ಈ ಆದೇಶ ಹೊರಡಿಸಿದ್ದಾರೆ. ನಾಳೆಯೂ ಮಳೆಯ ತೀವ್ರತೆ ಹೆಚ್ಚಾಗಲಿದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂಗಾರು ಮಳೆ ರಾಜ್ಯದಲ್ಲಿ ಬಿರುಸಾಗುತ್ತಲಿದ್ದು ನಾಳೆ ದಕ್ಷಿಣ ಕನ್ನಡದಲ್ಲಿ ತೀವ್ರವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂಬ ಮುನ್ನೆಚ್ಚರಿಕೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ.