ಪುತ್ತೂರು ಮತ್ತು ಕಡಬ ತಾಲೂಕು ವ್ಯಾಪ್ತಿಯನ್ನು ಒಳಗೊಂಡ ಪುತ್ತೂರು ವಲಯದ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿರುವ ಶ್ರೀ ಲೋಕೇಶ್ ಎಸ್.ಆರ್ ಅವರು ಇಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಭೇಟಿ ನೀಡಿ, ಶಿಕ್ಷಣ ಇಲಾಖೆಗೆ ಈ ಹಿಂದೆ ದೊರೆತ ಸಹಕಾರ ಮುಂದೆಯೂ ದೊರೆಯಲಿ ಎಂದು ಆಶಿಸಿದರು.
ಪುತ್ತೂರು ತಾಲೂಕಿಗೆ ವರ್ಗಾವಣೆಗೊಂಡು ಆಗಮಿಸಿದ ಬಳಿಕ ಈ ಶೈಕ್ಷಣಿಕ ಸಾಲಿನಲ್ಲಿ ಶಾಲಾ ಭೇಟಿ ಕಾರ್ಯಕ್ರಮವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಭೇಟಿಯೊಂದಿಗೆ ಆರಂಭಿಸಿ, ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ಮಾರ್ಗದರ್ಶನ ನೀಡಿದರು ಹಾಗೂ ಶಾಲಾ ಶೈಕ್ಷಣಿಕ ಸಾಧನೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಹಾಗೂ ಹಿರಿಯ ಶಿಕ್ಷಕರೊಂದಿಗೆ ವಿಚಾರ ವಿನಿಮಯ ನಡೆಸಿದರು.
ಈ ಶೈಕ್ಷಣಿಕ ವರ್ಷದಲ್ಲಿ ಕಲಿಕಾ ಚೇತರಿಕೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿಗೆ ಒತ್ತು ನೀಡುವಂತೆ ಸೂಚಿಸಿದರು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ಶಿವಪ್ರಕಾಶ್.ಎಂ ಮತ್ತು ಸಂಚಾಲಕರಾದ ಶ್ರೀ ರವಿನಾರಾಯಣ.ಎಂ ಉಪಸ್ಥಿತರಿದ್ದು, ಮಾನ್ಯ ಶಿಕ್ಷಣಾಧಿಕಾರಿಗಳಿಗೆ ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಿದರು.
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು
- ಕಾಸರಗೋಡಿನ ಮಸೀದಿ ಪರಿಸರದ ಮಣ್ಣು ತೆಗೆದ ಜೆಸಿಬಿಗೆ 45 ಲಕ್ಷ ದಂಡ; ಬಡ ಕುಟುಂಬ ಸಂಕಷ್ಟದಲ್ಲಿ – ಕಬ್ರಿಸ್ತಾನ್ ಭೂಮಿಯ ಉಸ್ತುವಾರಿ ಮಸೀದಿ ಅಧಿಕಾರಿಗಳಿಗೆ ಶಿಕ್ಷೆ ಇಲ್ಲ