ಖ್ಯಾತ ವಾಸ್ತುತಜ್ಞ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರನ್ನು ಭೀಕರವಾಗಿ ಹತ್ಯೆಗೈಯಲಾಗಿದೆ. ಪ್ರಸಿದ್ಧ ವಾಸ್ತು ತಜ್ಞರಾದ ಚಂದ್ರ ಶೇಖರ ಗುರೂಜಿ ಅವರನ್ನು ಹುಬ್ಬಳ್ಳಿ ನಗರದ ಉಣಕಲ್ ನ ಪ್ರೆಸಿಡೆಂಟ್ ಹೊಟೇಲ್ ನ ರಿಸಪ್ಶನ್ ಬಳಿ ದುಷ್ಕರ್ಮಿಗಳು ಇರಿದು ಕೊಲೆ ಮಾಡಿದ ಘಟನೆ ಇಂದು ಮಂಗಳವಾರ ಮಧ್ಯಾಹ್ನ ನಡೆದಿದೆ.
ಹೊಟೆಲ್ ರಿಸೆಪ್ಶನಿಸ್ಟ್ ಬಳಿ ಭಕ್ತರ ಸೋಗಿನಲ್ಲಿ ಬಂದು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಹೋಟೆಲ್ ಮುಂಭಾಗದಲ್ಲಿ ಮಂಗಳವಾರ ಮಧ್ಯಾಹ್ನ 12.30ರ ವೇಳೆಗೆ ಡಾ.ಚಂದ್ರಶೇಖರ್ ಗುರೂಜಿ ಮೇಲೆ ದಾಳಿ ನಡೆಸಿದ ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.