ಗುಂಡಿನ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಜಪಾನ್‌ನ ಮಾಜಿ ಪ್ರಧಾನಿ ಶ್ರೀ ಶಿಂಜೊ ಅಬೆ ಅವರು ನಿಧಾನ ಹೊಂದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿವೆ
ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು “ಜಪಾನ್‌ನ ಮಾಜಿ ಪ್ರಧಾನಿ ಶ್ರೀ ಶಿಂಜೊ ಅಬೆ ಅವರ ಹತ್ಯೆಯಿಂದ ತೀವ್ರ ದುಃಖವಾಗಿದೆ. ಪ್ರಧಾನ ಮಂತ್ರಿಯಾಗಿದ್ದ ಅವಧಿಯಲ್ಲಿ ಭಾರತ ಮತ್ತು ಜಪಾನ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ಶ್ರದ್ಧೆಯಿಂದ ಶ್ರಮಿಸಿದ ಆತ್ಮೀಯ ಸ್ನೇಹಿತನನ್ನು ಭಾರತ ಇಂದು ಕಳೆದುಕೊಂಡಿದೆ” ಎಂದು ಟ್ವೀಟ್ ಮಾಡಿದ್ದಾರೆ.
ಪಬ್ಲಿಕ್ ಬ್ರಾಡ್‌ಕಾಸ್ಟರ್ ಎನ್‌ಎಚ್‌ಕೆ ಪ್ರಕಾರ, ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಶುಕ್ರವಾರ ದಕ್ಷಿಣ ಜಪಾನ್‌ನಲ್ಲಿ ಪ್ರಚಾರ ಮಾಡುವಾಗ ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದರು.
ಜಪಾನ್‌ನ ಸುದೀರ್ಘ ಸೇವೆ ಸಲ್ಲಿಸಿದ ಪ್ರಧಾನ ಮಂತ್ರಿ ಅಬೆ ಅವರು ನಾರಾ ನಗರದಲ್ಲಿ ಭಾಷಣ ಮಾಡುತ್ತಿದ್ದಾಗ ಅವರು ಸುಮಾರು 11:30 ಗಂಟೆಗೆ (ಗುರುವಾರ ಭಾರತೀಯ ಕಾಲಮಾನ 10:30 ಗಂಟೆಗೆ ) ಗುಂಡು ಹಾರಿಸಲಾಗಿತ್ತು.