ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆ ಇಳಿಮುಖವಾಗುತ್ತಿರುವ ಲಕ್ಷಣಗಳು ಗೋಚರಿಸುತ್ತಿವೆ.
ಹವಾಮಾನ ಇಲಾಖೆಯ ವರದಿ ಆಧರಿಸಿ ಈ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು ಅದನ್ನು ರದ್ದುಪಡಿಸಲಾಗಿದೆ. ಈಗ ಜುಲೈ 16ರ ವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಹಿನ್ನಲೆಯಲ್ಲಿ ಕಳೆದ ಒಂದು ವಾರದಿಂದ ಮುಚ್ಚಿದ್ದ ಶಾಲೆಗಳು ನಾಳೆ ದಿನಾಂಕ 12.07.2022 ಮಂಗಳವಾರದಿಂದ ಪುನರಾರಂಭವಾಗಲಿದೆ.
ಆದುದರಿಂದ ನಾಳೆಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ, ಅನುದಾನ ಹಾಗೂ ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಕಾಲೇಜುಗಳು ಸೂಕ್ತ ಮುನ್ನೆಚ್ಚರಿಕೆ ವಹಿಸಿಕೊಂಡು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.
ಆಯಾಯ ತಾಲೂಕು ಗ್ರಾಮಗಳಲ್ಲಿ ಮಳೆಯ ಸಮಸ್ಯೆ ಇದ್ದಲ್ಲಿ ಡಿಡಿಪಿಐ, ಜಿಪಂ ಸಿಇಒ, ಜಿಲ್ಲಾಧಿಕಾರಿ ಕಚೇರಿಯ ಒಪ್ಪಿಗೆ ಪಡೆದು ಸ್ಥಳೀಯವಾಗಿ ರಜೆಯ ಬಗ್ಗೆ ನಿರ್ಧಾರ ಕೈಗೊಳ್ಳಬಹುದು ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.