ತೆಂಕುತಿಟ್ಟು ಯಕ್ಷಗಾನದ ದಂತಕಥೆ, ಮಹಾನ್ ಭಾಗವತರಾದ ಶ್ರೀ ದಾಮೋದರ ಮಂಡೆಚ್ಚರ ಹೆಸರಿನಲ್ಲಿ ನೀಡಲಾಗುವ ಮಂಡೆಚ್ಚ ಪ್ರಶಸ್ತಿಯನ್ನು ನಿನ್ನೆ ಅವರ ಪ್ರಿಯ ಶಿಷ್ಯರಾದ ಖ್ಯಾತ ಭಾಗವತ ಶ್ರೀ ದಿನೇಶ ಅಮ್ಮಣ್ಣಾಯರಿಗೆ ನೀಡಿ ಗೌರವಿಸಲಾಯಿತು.
ನಿನ್ನೆ ದಿನಾಂಕ 10.07.2022ರಂದು ಭಾನುವಾರ ಮದ್ಯಾಹ್ನ ಘಂಟೆ 3.30ಕ್ಕೆ ಶ್ರೀ ಕಟೀಲು ಕ್ಷೇತ್ರದ ಸರಸ್ವತಿ ಸದನದಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಅವರಿಗೆ ಪ್ರದಾನ ಮಾಡಲಾಯಿತು.
ಆ ನಂತರ ಯಕ್ಷಗಾಯನ ಮತ್ತು ಯಕ್ಷಗಾನ ಬಯಲಾಟ ನಡೆಯಿತು.