ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ತರಗತಿಯಲ್ಲಿ ಗಲಾಟೆ ಮಾಡಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳಿಗೆ ಶಿಕ್ಷಕಿಯೊಬ್ಬರು ಅಮಾನುಷವಾಗಿ ಥಳಿಸಿದ ಘಟನೆ ನಡೆದಿದೆ.
ಇತ್ತೀಚಿನ ಬೆಳವಣಿಗೆಯಲ್ಲಿ, ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳನ್ನು ಥಳಿಸಿದ ವಿಡಿಯೋ ವೈರಲ್ ಆದ ನಂತರ ಮಹಿಳಾ ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ.
ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ತರಗತಿಯಲ್ಲಿ ಗಲಾಟೆ ಮಾಡಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳಿಗೆ ಶಿಕ್ಷಕಿಯೊಬ್ಬರು ಅಮಾನುಷವಾಗಿ ಥಳಿಸಿದ ಘಟನೆ ನಡೆದಿದೆ. ಶಿಕ್ಷಕಿಯನ್ನು ಸುನಿಲ್ ಕುಮಾರಿ ಎಂದು ಗುರುತಿಸಲಾಗಿದೆ.
ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಅಸೋಹಾ ಬ್ಲಾಕ್‌ನಲ್ಲಿರುವ ಇಸ್ಲಾಂ ನಗರ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ದಾಖಲಾಗಿದೆ.
ಮಾಹಿತಿ ಪಡೆದ ನಂತರ, ಉನ್ನಾವೊ ಜಿಲ್ಲಾ ಪೊಲೀಸರು ಸ್ವಯಂ-ಪ್ರೇರಿತ ಸಂಜ್ಞೆ ತೆಗೆದುಕೊಂಡ ನಂತರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಸೋಹ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್‌ಗೆ ಸೂಚಿಸಿದರು.
ವೀಡಿಯೋ ನೋಡಿದ ಬಳಿಕ ನಾವು ತನಿಖೆ ಆರಂಭಿಸಿದ್ದು, ಶಾಲೆಯ ಆವರಣದಲ್ಲಿ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ ಎಂದು ಮೂಲ ಶಿಕ್ಷಾ ಅಧಿಕಾರಿ (ಬಿಎಸ್‌ಎ) ಉನ್ನಾವೋ, ಅಂಜಯ್ ತಿವಾರಿ ಹೇಳಿದ್ದಾರೆ. ಅಲ್ಲದೆ ಶಿಕ್ಷಕಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.