ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಗಂಡ ಹೆಂಡತಿ ಅರೆಸ್ಟ್ – ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ
ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅಮಲು ಪದಾರ್ಥಗಳನ್ನು ಪೂರೈಸುತ್ತಿದ್ದ ಆರೋಪದ ಮೇಲೆ ದಂಪತಿಯನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ಬಂಧಿತರನ್ನು ಕುಖ್ಯಾತ ಕ್ರಿಮಿನಲ್ ವಿಖ್ಯಾತ್ ಯಾನೆ ವಿಕ್ಕಿ ಬಪ್ಪಾಲ್ (28 ವರ್ಷ) ಬಪ್ಪಾಲ್ ಮತ್ತು ಆತನ ಹೆಂಡತಿ ಅಂಜನಾ (21 ವರ್ಷ) ಎಂದು ಗುರುತಿಸಲಾಗಿದೆ.
ಆರೋಪಗಳಿಂದ ಸುಮಾರು 90,000 ರೂಪಾಯಿಗಳ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ಮಂಗಳೂರು ಸಿಸಿಬಿ ಪೊಲೀಸರ ಮಹತ್ವದ ಕಾರ್ಯಾಚರಣೆಯಾಗಿದೆ. ಇತ್ತೀಚಿಗೆ ಮಂಗಳೂರಿನಲ್ಲಿ ಗಾಂಜಾ ಸೇವನೆ ಮತ್ತು ಪೂರೈಕೆ ಸಂಬಂಧಿಸಿ ಸಿಸಿಬಿ ಪೊಲೀಸರು ಕೆಲವು ವಿದ್ಯಾರ್ಥಿಗಳನ್ನು ಬಂಧಿಸಿದ್ದರು.
ಈ ಆರೋಪಿ ದಂಪತಿಗಳೂ ಕೂಡಾ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ಐ ರಾಜೇಂದ್ರ ನೇತೃತ್ವದ ಮಂಗಳೂರು ಸಿಸಿಬಿ ಪೊಲೀಸರ ತಂಡ ಮಂಗಳೂರು ಕಾವೂರಿನಲ್ಲಿರುವ ಶಂಕರನಗರದ ಕೆ. ಸಿ ಆಳ್ವ ಲೇ ಔಟ್ ನಲ್ಲಿರುವ ಮನೆಯೊಂದಕ್ಕೆ ದಿಢೀರ್ ದಾಳಿ ನಡೆಸಿದರು.
ಅಲ್ಲಿ ಆರೋಪಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಆರೋಪಿಗಳಲ್ಲಿ ಒಟ್ಟು 2.2 ಕೆಜಿ ಗಾಂಜಾ ಇತ್ತು. ಜೊತೆಗೆ 1500 ರೂಪಾಯಿ ನಗದು ಮತ್ತು ಡಿಜಿಟಲ್ ಸ್ಕೇಲ್ (ತೂಕ ಮಾಪನ) ಇತ್ತು. ಇವೆಲ್ಲವನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಒಟ್ಟು ಮೌಲ್ಯ 92000 ರೂಪಾಯಿಗಳು.
ಪ್ರಕರಣದಲ್ಲಿ ಇನ್ನೂ ಹಲವಾರು ವ್ಯಕ್ತಿಗಳಿದ್ದು ಅವರೆಲ್ಲರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆಯನ್ನು ನಡೆಸುತ್ತಿದ್ದಾರೆ.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions