ಚಾರ್ಮಾಡಿ ಘಾಟ್ ನಲ್ಲಿ ಭೀಕರ ದುರಂತ ಸಂಭವಿಸಿದೆ. ಘಾಟಿಯ ತಿರುವಿನಲ್ಲಿ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಮುಗುಚಿ ಬಿದ್ದಿದೆ.
ಗೂಡ್ಸ್ ಲಾರಿಯೊಂದು ತಿರುವಿನಲ್ಲಿ ರಸ್ತೆಯ ಬದಿ ಚರಂಡಿಗೆ ಪಲ್ಟಿಯಾಗಿ ಬಿದ್ದಿದೆ. ಆದರೆ ಅದೃಷ್ಟವಶಾತ್ ಚಾಲಕ ಮತ್ತು ಇನ್ನೋರ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.