ಇಸ್ಲಾಮಾಬಾದ್‌ನಲ್ಲಿ ಬುರ್ಖಾ ಧರಿಸಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಪುರುಷ ತಬ್ಬಿಕೊಂಡಿದ್ದಾನೆ.
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ವ್ಯಕ್ತಿಯೊಬ್ಬ ಕಿರುಕುಳ ನೀಡಿರುವ ವಿಡಿಯೋ ಅಂತರ್ಜಾಲದಲ್ಲಿ ಹರಿದಾಡುತ್ತಿದೆ.
ಹಗಲು ಹೊತ್ತಿನಲ್ಲಿ ಮಹಿಳೆಯೊಬ್ಬರು ಬುರ್ಖಾ ಧರಿಸಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಅಪರಿಚಿತ ವ್ಯಕ್ತಿ ಕಾಣಿಸಿಕೊಂಡು ಹಿಂಬದಿಯಿಂದ ಗಟ್ಟಿಯಾಗಿ ತಬ್ಬಿಕೊಳ್ಳುವ ಘಟನೆ ನಡೆದಿರುವುದನ್ನು ವಿಡಿಯೋ ತೋರಿಸುತ್ತದೆ.
ಇಸ್ಲಾಮಾಬಾದ್‌ನ ಸೆಕ್ಟರ್ I-10 ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳುವ ವೀಡಿಯೊವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾಗಿದೆ.
ಮಹಿಳೆ ತನ್ನಿಂದ ಪುರುಷನನ್ನು ದೂರ ತಳ್ಳಲು ಹೆಣಗಾಡುತ್ತಿರುವುದನ್ನು ಕಾಣಬಹುದು. ಆಕೆಗೆ ಕಿರುಕುಳ ನೀಡಿದ ಬಳಿಕ ಆತ ಓಡಿ ಹೋಗುತ್ತಿರುವುದು ಕಂಡು ಬಂದಿದೆ.