ರಾತ್ರಿಯಿಂದ ಬೆಳಗಿನ ವರೆಗೆ ಅಮೋಘ ತಾಳಮದ್ದಳೆ ಕೂಟ ನಡೆಯಲಿದೆ.
ಈ ಮಳೆಗಾಲದ ಅಮೋಘ ತಾಳಮದ್ದಳೆ ಪ್ರದರ್ಶನ ಮೂಡಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ. ತಾಳಮದ್ದಳೆ ಕ್ಷೇತ್ರದ ಪ್ರಸಿದ್ಧ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಯಕ್ಷಸಂಗಮ ಮೂಡಿಬಿದಿರೆ ಇವರು ಸಮಾಜ ಮಂದಿರ ಸಭಾ ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ದಿನಾಂಕ 23.07.2022ನೇ ಶನಿವಾರ ರಾತ್ರಿ ಘಂಟೆ 9ಕ್ಕೆ ಸರಿಯಾಗಿ ತಾಳಮದ್ದಳೆ ಆರಂಭವಾಗಲಿದೆ.
ದಮಯಂತಿ ಪುನಃ ಸ್ವಯಂವರ, ರಾವಣ ವಧೆ ಎಂಬ ಪ್ರಸಂಗದಲ್ಲಿ ಪ್ರಸಿದ್ಧ ಕಲಾವಿದರೇ ಅರ್ಥಧಾರಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ.
ಕಲಾವಿದರಾದ ಸುಣ್ಣಂಬಳ ವಿಶ್ವೇಶ್ವರ ಭಟ್ ಮತ್ತು ತಾರಾನಾಥ ವರ್ಕಾಡಿ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ. ಕಾರ್ಯಕ್ರಮದ ವಿವರಗಳಿಗೆ ಚಿತ್ರ ನೋಡಿ.
- ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ – ಚಂಪಾಷಷ್ಠಿ ಮಹೋತ್ಸವ 27-11-2024ರಿಂದ 12-12-2024ರ ವರೆಗೆ
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ