ಭಾರೀ ಅಪಘಾತ: ಅತೀ ವೇಗದಲ್ಲಿ ಬಂದ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಪೋಸ್ಟ್ ಗೆ ಢಿಕ್ಕಿ ಹೊಡೆದ ಭೀಕರ ಘಟನೆ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ನಲ್ಲಿ ನಡೆದಿದೆ.
ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಶಿರೂರು ಬೈಂದೂರು ತಾಲೂಕು ಬಳಿ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದೆ.
ಈ ವೇಳೆ ಟೋಲ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾಗಿದ್ದಾರೆ. ಆದರೆ ವೇಗವಾಗಿ ಬಂದ ಆಂಬ್ಯುಲೆನ್ಸ್ ಟೋಲ್ ಪ್ಲಾಜಾದಲ್ಲಿ ಪಿಲ್ಲರ್‌ಗೆ ಡಿಕ್ಕಿ ಹೊಡೆದಿದೆ.
ಆಂಬ್ಯುಲೆನ್ಸ್‌ನಲ್ಲಿದ್ದ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೆ, ಆಂಬ್ಯುಲೆನ್ಸ್‌ಗೆ ತೆರಳಲು ಸಹಾಯ ಮಾಡುತ್ತಿದ್ದ ಟೋಲ್ ಸಿಬ್ಬಂದಿಯೂ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.