ಉಡಪಿ : ಎಮ್.ಸುಧಾಕರ ರಾವ್(84 ವರ್ಷ)ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಕೆ.ಎಂ. ಸಿ. ಆಸ್ಪತ್ರೆಯಲ್ಲಿ ಇಂದು(25-07-2022) ಪೂರ್ವಾಹ್ನ 8.30ಕ್ಕೆ ನಿಧನರಾದರು.
ಬೀಡಿನಗುಡ್ಡೆಯಲ್ಲಿ ಇಂದು ಮಧ್ಯಾಹ್ನ ಅವರ ಅಂತ್ಯಕ್ರಿಯೆ ನೆರವೇರಿತು. ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಮೂವತ್ತೇಳು ವರ್ಷಗಳ ಕಾಲ ಉಪನ್ಯಾಸಕರಾಗಿ, ಒಂದು ವರ್ಷ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು.
ಜೀವಶಾಸ್ತ್ರದ ಬಗ್ಗೆ ಅಪಾರ ಪಾಂಡಿತ್ಯವನ್ನು ಹೊಂದಿದ ಸುಧಾಕರ್ ರಾಯರು ಬರೆದ ಪುಸ್ತಕ ಪದವಿಪೂರ್ವ ವಿದ್ಯಾರ್ಥಿಗಳಿಗೆ ಪಠ್ಯವಾಗಿ, ಶಿಕ್ಷಣ ಕ್ಷೇತ್ರದಲ್ಲಿ ತುಂಬಾ ಪ್ರಸಿದ್ಧವಾಗಿದೆ.
ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಮತ್ತು ಅಪಾರ ಶಿಷ್ಯವೃಂದವನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಕಾಲೇಜಿನ ಪ್ರಾಂಶುಪಾಲ ಡಾ.ಎ. ರಾಘವೇಂದ್ರ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷಡಾ. ಬಿ.ಎಮ್ .ಸೋಮಯಾಜಿ, ಕಾರ್ಯದರ್ಶಿ ತೇಜಸ್ವಿ ಶಂಕರ್ ಹಾಗೂ ಅಪಾರ ಸಂಖ್ಯೆಯ ಶಿಷ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

