ಜಾರ್ಖಂಡ್ ಬೊಕಾರೊದಲ್ಲಿ 9ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ಮೂರು ತಿಂಗಳ ಕಾಲ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಅಪರಾಧವು ಸುಮಾರು ಮೂರು ತಿಂಗಳ ಕಾಲ ನಡೆಯಿತು ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೂವರು ಆರೋಪಿಗಳನ್ನು ವಿಷ್ಣುಕುಮಾರ್, ಮಂತೋಷ್ ಮತ್ತು ಮನೋಜ್ ಕುಮಾರ್ ಎಂದು ಗುರುತಿಸಲಾಗಿದೆ.
ಆರೋಪಿಯನ್ನು ವೈಯಕ್ತಿಕವಾಗಿ ಪರಿಚಯವಿಲ್ಲ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ.ಹುಡುಗಿ ನಾಪತ್ತೆಯಾದ ಒಂದು ದಿನದ ನಂತರ, ಕುಟುಂಬ ಸದಸ್ಯರು ಹುಡುಕಾಟ ನಡೆಸಿದರು ಮತ್ತು ಏಪ್ರಿಲ್ 20 ರಂದು ಕಾಣೆಯಾದ ವ್ಯಕ್ತಿಯ ದೂರನ್ನು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ಪೊಲೀಸರು ದೂರನ್ನು ಗಂಭೀರವಾಗಿ ಪರಿಗಣಿಸಿಲ್ಲ, ಮಗಳು ಮನೆಗೆ ಬರುವವರೆಗೆ ಕಾಯುವಂತೆ ಸೂಚಿಸಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಪ್ರಕರಣ ದಾಖಲಾದ ನಂತರ ತನಿಖೆ ಆರಂಭಿಸಲಾಗಿದ್ದು, ಮೂವರು ಆರೋಪಿಗಳನ್ನು ಹೆಸರಿಸಲಾಗಿದೆ.
ಪೊಲೀಸರು ಶೀಘ್ರದಲ್ಲೇ ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಿದ್ದಾರೆ ಎಂದು ಡಿಎಸ್ಪಿ (ನಗರ) ಕುಲದೀಪ್ ಕುಮಾರ್ ಹೇಳಿದ್ದಾರೆ. ಆರೋಪಿಗಳನ್ನು ಗುರುತಿಸಿ ಬಂಧಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಡಿಎಸ್ಪಿ ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳು ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಏಪ್ರಿಲ್ 19 ರಂದು ಶಾಪಿಂಗ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಆರೋಪಿಗಳು ಮೂವರು ಬಾಲಕಿಯನ್ನು ಅಪಹರಿಸಿದ್ದಾರೆ. ಆರೋಪಿಗಳು ಬಾಲಕಿಯನ್ನು ಆಟೋರಿಕ್ಷಾದಲ್ಲಿ ಎಳೆದುಕೊಂಡು ಹೋಗಿ ಆಕೆಯ ಮುಖಕ್ಕೆ ಬಟ್ಟೆಯನ್ನು ಕಟ್ಟಿದ್ದರು. ಬಾಲಕಿಯನ್ನು ತೆಲಿದಿಹ್ ಪ್ರದೇಶಕ್ಕೆ ಕರೆದೊಯ್ದು ಕೊಠಡಿಯೊಂದರಲ್ಲಿ ಒತ್ತೆಯಾಳಾಗಿ ಇರಿಸಲಾಗಿತ್ತು.
ಆರೋಪಿಗಳು ಬಾಲಕಿಯನ್ನು ಕೋಣೆಯೊಂದರಲ್ಲಿ ಬೀಗ ಹಾಕಿ ಹೊರಗೆ ಹೋದಾಗಲೆಲ್ಲ ಆಕೆಯ ಬಾಯಿಗೆ ಬಟ್ಟೆ ಕಟ್ಟಿದ್ದರು.ಜುಲೈ 19 ರಂದು ನೆರೆಹೊರೆಯ ಮಹಿಳೆಯೊಬ್ಬರು ಬೀಗ ಒಡೆದು ಪರಾರಿಯಾಗಲು ಅವಕಾಶ ನೀಡಿದಾಗ ಬಾಲಕಿಯನ್ನು ರಕ್ಷಿಸಿದ್ದರು.
ಬಳಿಕ ಬಾಲಕಿ ತನಗಾದ ಕಷ್ಟವನ್ನು ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಜುಲೈ 24 ರಂದು, ಹುಡುಗಿ ತನ್ನ ಕುಟುಂಬ ಸದಸ್ಯರೊಂದಿಗೆ ಬೊಕಾರೊ ಮಹಿಳಾ ಪೊಲೀಸ್ ಠಾಣೆಗೆ ತಲುಪಿ ಪ್ರಕರಣದಲ್ಲಿ ಎಫ್‌ಐಆರ್‌ಎಫ್ ದಾಖಲಿಸಿದ್ದಳು.