Sunday, January 19, 2025
Homeಸುದ್ದಿನಿಟ್ಟೂರು ಪ್ರೌಢಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ

ನಿಟ್ಟೂರು ಪ್ರೌಢಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ

ಉಡುಪಿ:- ನಿಟ್ಟೂರು ಪ್ರೌಢ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ ದಿನಾಂಕ 22-07-22 ಶಾಲೆಯ ಸಭಾಂಗಣದಲ್ಲಿ ಜರಗಿತು.

ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಮುರಲಿ ಕಡೆಕಾರ್ ಪೋಷಕರನ್ನು ಕುರಿತು ವಿದ್ಯಾರ್ಥಿಗಳನ್ನು ರೂಪಿಸುವಲ್ಲಿ ಶಿಕ್ಷಕರಷ್ಟೇ ಪೋಷಕರ ಪಾತ್ರ ಮಹತ್ತರವಾದದ್ದು, ಪ್ರತಿ ದಿನವೂ ಹೆತ್ತವರು ತಮ್ಮ ಮಕ್ಕಳ ಜೊತೆಯಲ್ಲಿ ಒಂದಿಷ್ಟು ಹೊತ್ತು ಸಮಯ ಮೀಸಲಿಡಬೇಕು. ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಗಮನ ಹರಿಸಬೇಕು. ಆಗ ಮಾತ್ರ ವಿದ್ಯಾರ್ಥಿಗಳ ಕಲಿಕಾ ಸಾಧನೆ ಸುಲಭವಾಗುತ್ತದೆ. ಈ ನಿಟ್ಟಿನಲ್ಲಿ ಶಾಲೆ ಹಲವು ಚಟುವಟಿಕೆಗಳನ್ನು ಹಮ್ಮಿಕೊಂಡಿದೆ ಎಂದರು.

ಶಾಲಾ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗಿಶ್ಚಂದ್ರಾಧರ್, ಹಳೆವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ದಿನೇಶ್ ಪಿ. ಪೂಜಾರಿ ಶಾಲೆ ವಿದ್ಯಾರ್ಥಿಗಳ ಸರ್ವೊತೋಮುಖ ಏಳಿಗೆಗಾಗಿ ಹಮ್ಮಿಕೊಳ್ಳುತ್ತಿರುವ ಚಟುವಟಿಕೆಗಳ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಜೊತೆ ಕಾರ್ಯದರ್ಶಿ ದಿನೇಶ್ ಪಿ. ಪೂಜಾರಿ 8ನೇ ತರಗತಿಯ 77 ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಿದ ಬಟ್ಟಲುಗಳನ್ನು ವಿತರಿಸಲಾಯಿತು. ಶಾಲೆಯ ಹಳೆವಿದ್ಯಾರ್ಥಿಗಳಾದ ಶಶಿಧರ ಮೆಲಂಟಾ ಸಹೋದರರ ಧನ ಸಹಾಯದಿಂದ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ಉಚಿತ ಸಮವಸ್ತç ನೀಡಲಾಯಿತು.

ಶಾಲಾ ಹಳೆವಿದ್ಯಾರ್ಥಿ ಪರಶುರಾಮ ಶೆಟ್ಟಿ ಹಾಗೂ ನಿವೃತ ಶಿಕ್ಷಕ ಎಚ್.ಎನ್. ಶೃಂಗೇಶ್ವರ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಅನಸೂಯ ಸ್ವಾಗತಿಸಿದರು. ಶಿಕ್ಷಕ ದೇವದಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ-ರಕ್ಷಕ ಸಂಘದ ಸಂಯೋಜಕರಾದ ರಾಮದಾಸ್ ನಾಯ್ಕ್ ವಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments