ಉಡುಪಿ : ನಿಟ್ಟೂರು ಪ್ರೌಢಶಾಲೆಯ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಪಿ.ಎಲ್. ಅಣ್ಣಾಜಿ ರಾವ್ ಸ್ಮಾರಣಾರ್ಥ ಅವರ ಸುಪುತ್ರ ಪಿ.ಎಲ್.ಎನ್. ರಾವ್ ಇವರ ಪ್ರಾಯೋಜಕತ್ವದಲ್ಲಿ 40 ವಿದ್ಯಾರ್ಥಿಗಳಿಗೆ ತಲಾ ಒಂದು ಸಾವಿರ ರೂಪಾಯಿಯಂತೆ ಒಟ್ಟು 40000/- ರೂಪಾಯಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ದಿನಾಂಕ 22-07-2022ರಂದು ಶಾಲಾ ಸಭಾಂಗಣದಲ್ಲಿ ಜರಗಿತು.
ನಿಟ್ಟೂರು ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ನಿವೃತ್ತ ಮುಖ್ಯೋಪಾಧ್ಯಾಯ ಮುರಲಿ ಕಡೆಕಾರ್ ವಿದ್ಯಾರ್ಥಿವೇತನ ವಿತರಣೆ ಮಾಡಿ ಶುಭ ಹಾರೈಸಿದರು ಮುಖ್ಯ ಅಭ್ಯಾಗತರಾಗಿ ನಿಟ್ಟೂರು ಪ್ರೌಢಶಾಲೆಯ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗಿಶ್ಚಂದ್ರಧರ, ನಿಟ್ಟೂರು ಎಜುಕೇಶನಲ್ ಸೊಸೈಟಿಯ ಜೊತೆಕಾರ್ಯದರ್ಶಿ ದಿನೇಶ್ ಪಿ. ಪೂಜಾರಿ, ಹಳೆವಿದ್ಯಾರ್ಥಿ ಪರಶುರಾಮ ಶೆಟ್ಟಿ, ನಿವೃತ್ತ ಅಧ್ಯಾಪಕ ಎಚ್.ಎನ್. ಶೃಂಗೇಶ್ವರ ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯಿನಿ ಅನಸೂಯ ಸ್ವಾಗತಿಸಿದರು. ಶಿಕ್ಷಕ ದೇವದಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕ-ರಕ್ಷಕ ಸಂಘದ ಸಂಯೋಜಕ ರಾಮದಾಸ್ ನಾಯ್ಕ್ ವಂದಿಸಿದರು.